Advertisement

ಸ್ವಯಂ ಲಾಕ್‌ಡೌನ್‌ಗೆ ವ್ಯಾಪಾರಸ್ಥರ ನಿರ್ಧಾರ

05:03 PM Jul 10, 2020 | Suhan S |

ರಾಣಿಬೆನ್ನೂರ: ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ವ್ಯಾಪಾರಸ್ಥರು ಸ್ವಯಂ ಪ್ರೇರಿತರಾಗಿ ಲಾಕ್‌ಡೌನ್‌ ಮಾಡಿಕೊಂಡಿದ್ದಾರೆ.

Advertisement

ನಗರದಲ್ಲಿ ಈಗಾಗಲೇ ದೊಡ್ಡಪೇಟೆ ಹಾಗೂ ಮಾರುತಿ ನಗರ ಕೆಲಭಾಗದ ಪ್ರದೇಶ, ಸಿದ್ದೇಶ್ವರ ನಗರ ಹಾಗೂ ತಾಲೂಕಿನ ಹಲಗೇರಿ ಹಾಗೂ ಹುಣಸಿಕಟ್ಟಿ ಸೇರಿದಂತೆ ವಿವಿಧ ಭಾಗದಲ್ಲಿ ಈಗಾಗಲೇ ಕೋವಿಡ್ ಪಾಸಿಟಿವ್‌ ಪ್ರಕರಣ ಕಂಡು ಬಂದಿರುವುದರಿಂದ ಸೀಲ್‌ಡೌನ್‌ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಪಾಸಿಟಿವ್‌ ಪ್ರಕರಣ ಕಂಡುಬಂದ ಸುತ್ತಲಿನ ಪ್ರದೇಶ ಸ್ಯಾನಿಟೈಸ್‌ ಮಾಡಲಾಗಿದೆ. ನೆಹರೂ ಮಾರುಕಟ್ಟೆಯ ವರ್ತಕರ ಸಂಘದವರು ಸಭೆ ನಡೆಸಿ ಕೋವಿಡ್ ನಿಯಂತ್ರಣ ಉದ್ದೇಶದಿಂದ ಪ್ರತಿದಿನ ಬೆಳಗ್ಗೆ 6ರಿಂದ ಮಧ್ಯಾಹ್ನ 3ರ ವರೆಗೆ ವ್ಯಾಪಾರ ವಹಿವಾಟು ಮಾಡಲು ನಿರ್ಧರಿಸಿದ್ದಾರೆ. ರವಿವಾರ ಕಡ್ಡಾಯವಾಗಿ ಬಂದ್‌ ಮಾಡಬೇಕು. ವ್ಯಾಪಾರದ ಸಮಯದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜತೆಗೆ ಮಾಸ್ಕ್ ಧರಿಸಬೇಕು ಹಾಗೂ ಸ್ಯಾನಿಟೈಸರ್‌ ಸಿಂಪಡಿಸಬೇಕು ಎಂದೂ ತೀರ್ಮಾನಿದ್ದಾರೆಂದು ತಿಳಿದು ಬಂದಿದೆ.

ಇನ್ನು ಎಪಿಎಂಸಿ ಮಾರುಕಟ್ಟೆಯಲ್ಲಿ ಸೋಮವಾರ ಹಾಗೂ ಗುರುವಾರ ಹೆಚ್ಚಿನ ವ್ಯಾಪಾರ ವಹಿವಾಟು ನಡೆಯುತ್ತಿದ್ದು, ಅಂದು ಮಧ್ಯಾಹ್ನ 2 ಗಂಟೆಯೊಳಗೆ ವ್ಯಾಪಾರ ವಹಿವಾಟು ಮುಗಿಯುತ್ತದೆ.ಉಳಿದ ದಿನಗಳಲ್ಲಿ ವ್ಯಾಪಾರ ವಹಿವಾಟು ಇರುವುದಿಲ್ಲ. ಅಲ್ಲದೆ ಬಿತ್ತನೆ ಅವಧಿ ಹಿನ್ನೆಲೆಯಲ್ಲಿ ರೈತರು ಹೆಚ್ಚಾಗಿ ಮಾರುಕಟ್ಟೆಗೆ ಬರುವುದಿಲ್ಲ. ಮಧ್ಯಾಹ್ನದೊಳಗೆ ಎಲ್ಲಾ ವ್ಯಾಪಾರ ವಹಿವಾಟು ಮುಗಿದು ಹೋಗುತ್ತದೆ ಎನ್ನುತ್ತಾರೆ ವರ್ತಕರ ಸಂಘದ ಅಧ್ಯಕ್ಷ ಸದಾಶಿವ ಉಪ್ಪಿನ. ಕೋವಿಡ್ ಹಿನ್ನೆಲೆಯಲ್ಲಿ ಮಧ್ಯಾಹ್ನದ ವರೆಗೆ ವ್ಯಾಪಾರ ವಹಿವಾಟು ಮಾಡಬೇಕು ಎಂದು ಶಾಸಕ ಅರುಣಕುಮಾರ ಪೂಜಾರ ವ್ಯಾಪಾರಸ್ಥರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಜನರು ತಮಗೆ ತಾವೇ ಜಾಗೃತರಾಗಿ ಸ್ವಯಂಪ್ರೇರಿತ ಲಾಕ್‌ಡೌನ್‌ ಮಾಡಿಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದ್ದು ಕೊರೊನಾ ತಡೆಗಟ್ಟಲು ಸಹಕರಿಯಾಗಲಿದೆ ಎಂಬುದು ಪ್ರಜ್ಞಾವಂತ ನಾಗರಿಕರ ಅಭಿಪ್ರಾಯವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next