Advertisement
ವಿಕಾಸಸೌಧದಲ್ಲಿ ಗುರುವಾರ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧೀನದಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ , ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರ ವಿದ್ಯಾ ಮಂಡಳಿ (ಕೆಎಸ್‌ಸಿಎಸ್‌ಟಿ), ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ(ಕೆಎಸ್‌ಟಿಎ)ಯಂತಹ ಅಧೀನ ಸಂಸ್ಥೆಗಳಿವೆ. ಈ ಸಂಸ್ಥೆಗಳ ಆಡಳಿತಾತ್ಮಕ ನಿರ್ವಹಣೆಯನ್ನು ಸುಗಮವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಒಗ್ಗೂ ಡಿಸಬೇಕಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಈ ಎಲ್ಲ ಅಧೀನ ಸಂಸ್ಥೆಗಳಿಗೆ ಅಗತ್ಯ ಅನುದಾನ ನೀಡುವ ಸಂಸ್ಥೆ ಯಾಗಿಯಷ್ಟೇ ಇರದೆ, ಆಡಳಿತಾತ್ಮಕವಾಗಿ ಹೆಚ್ಚಿನ ಅಭಿವೃದ್ಧಿ ತರುವ ನಿಟ್ಟಿನಲ್ಲಿ ಇದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರಸ್ತಾವನೆ ಸಿದ್ಧಗೊಳಿಸುವಂತೆ ಆದೇಶಿಸಿದರು.
ಕರ್ನಾಟಕ ರಿಸರ್ಚ್ ಫೌಂಡೇಷನ್ ಸ್ಥಾಪನೆಯ ನಿಟ್ಟಿನಲ್ಲಿ ಸದ್ಯದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು. ರಾಜ್ಯದಲ್ಲಿ ಸ್ಥಾಪನೆಯಾಗುವ ವಿಜ್ಞಾನ ಕೇಂದ್ರಗಳು ಹಾಗೂ ತಾರಾಲಯಗಳಿಗೆ ಏಕರೂಪದ ವಿಸ್ತೃತ ಯೋಜನೆ (ಡಿಪಿಆರ್) ರೂಪಿಸಬೇಕು. ಹೊಸದಾಗಿ ನಿರ್ಮಾಣವಾಗುವ ಎಲ್ಲ ಕೇಂದ್ರಗಳಿಗೂ ಅದು ಅನ್ವಯವಾಗುವಂತಹ ಯೋಜನೆ ರೂಪಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.