ಬೆಂಗಳೂರು: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ದಬ್ಬಾಳಿಕೆ ಹಾಗೂ ಕರ್ನಾಟಕದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)ಯನ್ನು ನಿಷೇಧಿಸಬೇಕೆಂದು ಆಗ್ರಹಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ಇದನ್ನೂ ಓದಿ:ದೇವರ ದರ್ಶನದಿಂದ ಹಿಂತಿರುಗುವಾಗ ಎದುರಾದ ಜವರಾಯ; ಟ್ರ್ಯಾಕ್ಟರ್ ಪಲ್ಟಿ ಹೊಡೆದು ಇಬ್ಬರ ಸಾವು
ಎಂಇಎಸ್ ನಿಷೇಧಕ್ಕೆ ಒತ್ತಾಯಿಸಿ ಡಿಸೆಂಬರ್ 31ರಂದು ಬೆಳಗ್ಗೆ 6ಗಂಟೆಯಿಂದ ಸಂಜೆ 6ಗಂಟೆವರೆಗೆ ಕರ್ನಾಟಕ ಬಂದ್ ನಡೆಯಲಿದೆ. ಈ ಸಂದರ್ಭದಲ್ಲಿ ಅಗತ್ಯಸೇವೆ ಹೊರತುಪಡಿಸಿ, ಇನ್ನುಳಿದಂತೆ ಹೋಟೆಲ್, ಬಸ್ ಸಂಚಾರ, ಅಂಗಡಿ ಮುಂಗಟ್ಟು ಬಂದ್ ಮಾಡುವ ಮೂಲಕ ಬೆಂಬಲ ನೀಡಬೇಕೆಂದು ಕನ್ನಡ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಬುಧವಾರ(ಡಿಸೆಂಬರ್ 22) ತಿಳಿಸಿದ್ದಾರೆ.
ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ನಿಷೇಧಿಸುವ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳದ ಪರಿಣಾಮ ಡಿಸೆಂಬರ್ 31ರಂದು ಕರ್ನಾಟಕ ಬಂದ್ ನಡೆಸಲು ಇಂದು ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ವಾಟಾಳ್ ನಾಗರಾಜ್ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಒಂದು ವಾರದೊಳಗೆ ಎಂಇಎಸ್ ನಿಷೇಧಿಸದಿದ್ದರೆ ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್ ನಡೆಯಲಿದೆ. ಅಲ್ಲದೇ ಎಂಇಎಸ್ ಅನ್ನು ನಿಷೇಧಿಸುವವರೆಗೆ ಕನ್ನಡ ಪರ ಸಂಘಟನೆಗಳ ಹೋರಾಟ ಮುಂದುವರಿಯಲಿದೆ ಎಂದು ವಾಟಾಳ್ ಹೇಳಿದರು.