Advertisement

Karnataka: ಸಕಾಲ ಅರ್ಜಿ ತಿರಸ್ಕೃತಗೊಂಡರೆ ಮೊಬೈಲ್‌ಗೆ ಸಂದೇಶ ರವಾನೆ

11:23 PM Dec 02, 2023 | Team Udayavani |

ಬೆಂಗಳೂರು: ಸಕಾಲ ಅಧಿಸೂಚಿತ ಸೇವೆಗಳ ಅಡಿಯಲ್ಲಿ ಸಲ್ಲಿಸುವ ಅರ್ಜಿಗಳು ತಿರಸ್ಕೃತಗೊಂಡಿದ್ದರೆ ಅಂತಹವರ ನೋಂದಾಯಿತ ಮೊಬೈಲ್‌ ಸಂಖ್ಯೆಗೆ ಪ್ರಥಮ ಮೇಲ್ಮನವಿ ಸಲ್ಲಿಸಲು ಅನುಕೂಲವಾಗುವಂತೆ ಲಿಂಕ್‌ಗಳನ್ನು ಕಳುಹಿಸುವ ವ್ಯವಸ್ಥೆಯನ್ನು ಸಕಾಲ ಮಿಷನ್‌ ಜಾರಿಗೆ ತಂದಿದೆ.

Advertisement

ಅರ್ಜಿ ತಿರಸ್ಕೃತಗೊಂಡಿದ್ದಲ್ಲಿ ಅರ್ಜಿದಾರರು ಸಕ್ಷಮ ಪ್ರಾಧಿಕಾರಿಗೆ ಪ್ರಥಮ ಮೇಲ್ಮನವಿ ಸಲ್ಲಿಸಲು ಸಕಾಲ ಮಿಷನ್‌ ಅವಕಾಶ ಕಲ್ಪಿಸಿದೆ. ನಾಗರಿಕರು ಈ ಅವಕಾಶವನ್ನು ಪರಿಣಾಮಕಾರಿಯಾಗಿ ಹಾಗೂ ಸುಲಭವಾಗಿ ಬಳಸಿಕೊಳ್ಳಲು ಅನುವು ಮಾಡಿಕೊಡುವ ಉದ್ದೇಶದಿಂದ ಮನವಿ ಹಾಕಲು ಲಿಂಕ್‌ನ್ನು ಎಸ್‌ಎಂಎಸ್‌ ಮೂಲಕ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಸಕಾಲ ಮಿಷನ್‌ ಹೆಚ್ಚುವರಿ ಯೋಜನ ನಿರ್ದೇಶಕಿ ಪಲ್ಲವಿ ಆಕುರಾತಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ತಿರಸ್ಕೃತಗೊಂಡ ಅರ್ಜಿಗಳಿಗೆ ಸಂಬಂಧಿಸಿದಂತೆ ಸ್ವಯಂಚಾಲಿತವಾಗಿ ಎಸ್‌ಎಂಎಸ್‌ ಕಳುಹಿಸುವ ಸೇವೆಯನ್ನು ಸಪ್ಟೆಂಬರ್‌ ತಿಂಗಳಿನಿಂದ ಚಾಲನೆಗೊಳಿಸಲಾಗಿದೆ. ವಿದ್ಯುನ್ಮಾನ ನಾಗರಿಕ ಸೇವಾ ವಿತರಣ ನಿರ್ದೇಶನಾಲಯದಿಂದ ಇದುವರೆಗೆ ಒಟ್ಟು 3,18,420 ಎಸ್‌ಎಂಎಸ್‌ಗಳನ್ನು ಕಳುಹಿಸಲಾಗಿದೆ. ಸಾರಿಗೆ ಇಲಾಖೆಯಲ್ಲಿ ಅರ್ಜಿಗಳ ಮಾಹಿತಿಯನ್ನು ಸಕಾಲ ತಂತ್ರಾಂಶಕ್ಕೆ ಮ್ಯಾನ್ಯುಯಲ್‌ ಆಗಿ ಪುಶ್‌ ಮಾಡುತ್ತಿದ್ದು, ಇದನ್ನು ಅಟೋಪುಷ್‌ಗೆ ಬದಲಾಯಿಸಲಾಗಿದೆ. ಇದರಿಂದ, ಸಕಾಲದಲ್ಲಿ ಬಾಕಿ ಇದ್ದ ಅರ್ಜಿಗಳ ಸಂಖ್ಯೆಯು ಗಣನೀಯವಾಗಿ ಇಳಿಕೆಗೊಂಡು 9691 ರಿಂದ 2682 ಗಳಿಗೆ ಇಳಿಕೆಯಾಗಿದೆ ಎಂದು ಪಲ್ಲವಿ ಅವರು ವಿವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next