Advertisement

Film producer: ಚಿತ್ರ ನಿರ್ಮಾಪಕನಿಗೆ ಮೀಟರ್‌ ಬಡ್ಡಿ ಕಾಟ!

12:10 PM Jun 29, 2024 | Team Udayavani |

ಬೆಂಗಳೂರು: ಅಧಿಕ ಬಡ್ಡಿಗೆ ಬೇಸತ್ತ ಸಿನಿಮಾ ನಿರ್ಮಾಪಕ ಪುಷ್ಕರ್‌ ಮಲ್ಲಿಕಾರ್ಜುನಯ್ಯ ಅವರು ಸಹಕಾರ ಸಂಘಗಳ ಉಪನಿಬಂಧಕರಿಗೆ ನೀಡಿದ್ದ ದೂರು ಆಧರಿಸಿ ಸಿಸಿಬಿ ಪೊಲೀಸರು ನಾಲ್ವರು ಆರೋ ಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

ಮಲ್ಲಿಕಾರ್ಜುನಯ್ಯ ಮೊದಲು ಸಹಕಾರ ಸಂಘಗಳ ಉಪ ನಿಬಂಧಕ ಕಿಶೋರ್‌ ಕುಮಾರ್‌ ಅವರಿಗೆ ದೂರು ನೀಡಿದ್ದರು. ಅದನ್ನು ಅವರು ಪೊಲೀಸರಿಗೆ ವರ್ಗಾಯಿಸಿ ದ್ದರು. ಆ ದೂರು ಆಧರಿಸಿ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯಲಹಂಕ ನಿವಾಸಿ ಡಿ.ಬಿ.ಆದರ್ಶ, ಸಿ.ಹರ್ಷ, ಶಿವು, ಡಿ.ಬಿ.ಹರ್ಷ ವಿರುದ್ಧ ಕರ್ನಾಟಕ ಲೇವಾ ದೇವಿದಾರರ ಕಾಯ್ದೆ ಮತ್ತು ಕರ್ನಾಟಕ ಮಿತಿ ಮೀರಿದ ಬಡ್ಡಿ ವಿಧಿಸುವಿಕೆ ನಿಷೇಧ ಕಾಯ್ದೆಯಡಿ ಎಫ್ಐಆರ್‌ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.

ದೂರಿನಲ್ಲಿ ಏನಿದೆ?: ನಿರ್ಮಾಪಕ ಪುಷ್ಕರ್‌ ನೀಡಿದ ದೂರಿನಲ್ಲಿ ನಾನು ಬಸವೇಶ್ವರನಗರದಲ್ಲಿ ಪುಷ್ಕರ್‌ ಫಿಲಂ ಸಂಸ್ಥೆ ಹೊಂದಿದ್ದು, ಗೋಧಿಬಣ್ಣ ಸಾಧಾರಣ ಮೈಕಟ್ಟು, ಕಿರಿಕ್‌ ಪಾರ್ಟಿ, ಅವನೇಶ್ರೀಮನ್‌ ನಾರಾಯಣ ಸೇರಿ 12 ಸಿನಿಮಾಗಳನ್ನು ನಿರ್ಮಿಸಿದ್ದೇನೆ. ಅವನೇ ಶ್ರೀಮನ್‌ ನಾರಾಯಣ, ಅವತಾರ ಪುರುಷ-1, ಅವತಾರ ಪುರುಷ-2 ಸಿನಿಮಾಗಳು ಹಾಗೂ ಕೋವಿಡ್‌ನಿಂದ ಸಾಕಷ್ಟು ಹಣ ಕಳೆದುಕೊಂಡು ಆರ್ಥಿಕ ನಷ್ಟ ಹೊಂದಿದ್ದೆ. ಹೀಗಾಗಿ 2019ರಲ್ಲಿ ನನ್ನ ಸಂಬಂಧಿ ಡಿ.ಬಿ.ಆದರ್ಶ ಬಳಿ ಸಾಲಕ್ಕೆ ಹಣ ಕೇಳಿದೆ. ಅದಕ್ಕೆ ಆತನಿಂದ ತಿಂಗಳಿಗೆ ಶೇ.5ರ ಬಡ್ಡಿಯಂತೆ 2019ರಿಂದ 2023ರ ವರೆಗೆ ಹಂತ ಹಂತವಾಗಿ 5 ಕೋಟಿ ರೂ. ಸಾಲ ಪಡೆದಿದ್ದೆ. ಈ ಸಾಲಕ್ಕೆ ಭದ್ರತೆಯಾಗಿ 10 ಖಾಲಿ ಚೆಕ್‌ಗಳನ್ನು ನೀಡಿದ್ದೆ ಎಂದು ಪುಷ್ಕರ್‌ ದೂರಿನಲ್ಲಿ ಉಲ್ಲೇಖೀಸಿದ್ದರು.

ಅಸಲು-ಬಡ್ಡಿ ಸೇರಿ 11.5 ಕೋಟಿ ಕೊಟ್ಟಿದ್ದೇನೆ: ಆದರ್ಶ್‌ನಿಂದ ಪಡೆದಿದ್ದ 5 ಕೋಟಿ ರೂ. ಸಾಲಕ್ಕೆ ಪ್ರತಿ ತಿಂಗಳು ಬಡ್ಡಿ ಪಾವತಿಸಿದ್ದೇನೆ. ಬಳಿಕ ಅದರ್ಶ್‌ ಹಾಗೂ ಆತ ಹೇಳಿದ ಇತರೆ ವ್ಯಕ್ತಿಗಳಿಗೆ ವಿವಿಧ ಹಂತಗಳಲ್ಲಿ ಅಸಲು ಮತ್ತು ಬಡ್ಡಿ ರೂಪದಲ್ಲಿ ಒಟ್ಟು 11.50 ಕೋಟಿ ರೂ. ನೀಡಿದ್ದೇನೆ. ಆದರೂ ಆದರ್ಶ್‌ ಹಾಗೂ ಇತರರು, ನೀನು ನೀಡಿರುವ ಹಣ ಬಡ್ಡಿ ಮತ್ತು ಚಕ್ರ ಬಡ್ಡಿಗೆ ಸರಿಯಾಗಿದೆ. ಹೀಗಾಗಿ ಇನ್ನೂ ನೀನು ನಮಗೆ 13 ಕೋಟಿ ರೂ. ಹಣ ನೀಡಬೇಕು ಎಂದು ಬೇಡಿಕೆ ಇರಿಸಿದ್ದಾರೆ. ಅಲ್ಲದೆ, ಆದರ್ಶ್‌, ಹರ್ಷ ಹಾಗೂ ಸಚಹರರು ನನ್ನ ಮನೆ ಮತ್ತು ಕಚೇರಿಗೆ ಹುಡುಗರನ್ನು ಕಳುಹಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾರೆ.

Advertisement

ಜತೆಗೆ ಆದರ್ಶ್‌ ಮತ್ತು ಹರ್ಷ ಲೇವಾದೇವಿ ವ್ಯವಹಾರ ಮಾಡಲು ಸಹಕಾರ ಇಲಾಖೆಯಿಂದ ಯಾವುದೇ ಪರವಾನಗಿ ಪಡೆದುಕೊಂಡಿಲ್ಲ. ಆದರೂ ಸಾರ್ವಜನಿಕರಿಂದ ಭದ್ರತೆಗೆ ಖಾಲಿ ಚೆಕ್‌ಗಳು, ಆಸ್ತಿ ಪತ್ರಗಳನ್ನು ಪಡೆದು ಸಾಲ ನೀಡುತ್ತಿದ್ದಾರೆ. ಮಾಸಿಕ ಶೇ.5ರಿಂದ ಶೇ.15ರಷ್ಟು ಬಡ್ಡಿ ವಸೂಲಿ ಮಾಡುತ್ತಿದ್ದಾರೆ. ಬಡ್ಡಿ ಹಣ ನೀಡಿದ ಸಾಲಗಾರರ ಮನೆ ಬಳಿ ಹುಡುಗರನ್ನು ಕಳುಹಿಸಿ ಹೆದರಿಸುವುದು, ನಿಂದಿಸುವುದು ಹಾಗೂ ಪ್ರಾಣ ಬೆದರಿಕೆ ಹಾಕಿಸುತ್ತಾರೆ. ನಾನು ಬಡ್ಡಿ ಸಮೇತ ಅಸಲು ತೀರಿಸಿದ್ದರೂ ಅಧಿಕ ಬಡ್ಡಿಗೆ ಬೇಡಿಕೆ ಇರಿಸಿ, ಕೊಲೆ ಬೆದರಿಕೆ ಹಾಕಿರುವ ಆದರ್ಶ ಹಾಗೂ ಆತನ ಸಹಚರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ನಿರ್ಮಾಪಕ ದೂರಿನಲ್ಲಿ ಕೋರಿದ್ದರು.

ಅದನ್ನು ಸಹಕಾರ ಸಂಘಗಳ ನಿಬಂಧಕ ಕಿಶೋರ್‌ ಕುಮಾರ್‌ ಸಿಸಿಬಿಗೆ ದೂರು ನೀಡಿದ್ದಾರೆ. ಈ ಸಂಬಂಧ ನಾಲ್ವರ ವಿರುದ್ಧ ಎಫ್ಐಆರ್‌ ದಾಖಲಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next