Advertisement
ಸುಳ್ಯ: ಅಭ್ಯರ್ಥಿಗೆ ಅಂಗಾರ ಬೆಂಬಲಟಿಕೆಟ್ ಕೈ ತಪ್ಪಿದ್ದಕ್ಕೆ ಬೇಸರಗೊಂಡು ರಾಜಕೀಯ ನಿವೃತ್ತಿ ಘೋಷಿಸಿದ್ದ ಸಚಿವ ಎಸ್| ಅಂಗಾರ ತಮ್ಮ ನಿರ್ಧಾರವನ್ನು ವಾಪಸು ಪಡೆದು ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡಲು ತೀರ್ಮಾನಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರು ಎ.18ರಂದು ನಾಮ ಪತ್ರ ಸಲ್ಲಿಸುವರು. ರಾಜೀನಾಮೆ ಸಲ್ಲಿಸಿದ್ದ ವೆಂಕಟ್ ವಳಲಂಬೆ ರಾಜೀನಾಮೆ ಹಿಂಪಡೆಯುವ ಸಾಧ್ಯತೆ ಇದೆ. ಕಾಂಗ್ರೆಸ್, ಆಪ್ ಪಕ್ಷಗಳ ಪ್ರಚಾರ ಮುಂದುವರಿದಿದೆ.
ಕ್ಷೇತ್ರದ ಪಕ್ಷದ ನಿರ್ವಹಣ ಸಮಿತಿ ಸಭೆ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರ ಉಪಸ್ಥಿತಿಯಲ್ಲಿ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಸಹ ಮನೆ ಮನೆ ಪ್ರಚಾರ ಕಾರ್ಯ ನಡೆಸಿದ್ದಾರೆ. ಪುತ್ತೂರು: ಜೆಡಿಎಸ್ ಸೇರಿದ ದಿವ್ಯಪ್ರಭಾ
ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ದಿವ್ಯಾಪ್ರಭಾ ಚಿಲ್ತಡ್ಕ ಅವರು ಪಕ್ಷ ತ್ಯಜಿಸಿ ಜೆಡಿಎಸ್ ಸೇರ್ಪಡೆಗೊಂಡು ಪುತ್ತೂರು ಕ್ಷೇತ್ರದ ಟಿಕೆಟ್ ಪಡೆದಿದ್ದಾರೆ. ಎ. 16 ಅಥವಾ 17ರಂದು ಬೆಂಬಲಿಗರ ಸಭೆ ನಡೆಸುವ ಸಾಧ್ಯತೆ ಇದೆ. ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಮಠ- ಮಂದಿರಗಳಿಗೆ ಹಾಗೂ ಪಕ್ಷದ ನಾಯಕರ ಮನೆಗಳಿಗೆ ಭೇಟಿ ನೀಡಿದರು.
Related Articles
ಮಂಗಳೂರು ನಗರ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ| ವೈ. ಭರತ್ ಶೆಟ್ಟಿ ಅವರು ತಮ್ಮ ಕ್ಷೇತ್ರದ ವಿವಿಧ ದೇವಸ್ಥಾನ, ದೈವಸ್ಥಾನಗಳನ್ನು ಭೇಟಿ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಎ.18ರಂದು ಅವರು ನಾಮಪತ್ರ ಸಲ್ಲಿಸುವರು. ಪಕ್ಷದ ಕಾರ್ಯಕರ್ತರ ಜೊತೆ ಸಮಾಲೋಚನೆ, ಸಭೆಗಳನ್ನು ನಡೆಸಿದರು. ಆದರೆ ಕಾಂಗ್ರೆಸ್ ಅಭ್ಯರ್ಥಿ ಹೆಸರು ಇನ್ನೂ ಘೋಷಣೆ ಬಾಕಿ ಇದೆ.
Advertisement
ಬಂಟ್ವಾಳ: ರಾಜೇಶ್ ನಾೖಕ್ ಸ್ವಾಮೀಜಿ ಭೇಟಿಬಿಜೆಪಿ ಅಭ್ಯರ್ಥಿ ಶಾಸಕ ರಾಜೇಶ್ ನಾೖಕ್ ಉಳಿಪಾಡಿ ಗುತ್ತು ಅವರು ಎ. 15ರಂದು ನಾಮಪತ್ರ ಸಲ್ಲಿಸಲಿದ್ದು, ಮಾಣಿ ಮಠಕ್ಕೆ ತೆರಳಿ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಬಳಿಕ ಪಕ್ಷದ ಕಚೇರಿಯಲ್ಲಿ ಹಲವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಅವರು ಕೊಳ್ನಾಡು ಭಾಗದಲ್ಲಿ ಮನೆ ಮನೆ ಭೇಟಿ, ಕಾಂಗ್ರೆಸ್ ಕಚೇರಿಯಲ್ಲಿ ಡಾ|ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಉಡುಪಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಹಿರಿಯ ಕಾಂಗ್ರೆಸ್ ಮುಖಂಡ ಬಿ.ಜನಾರ್ದನ ಪೂಜಾರಿ ಅವರ ಆಶೀರ್ವಾದ ಪಡೆದರು. ಬೆಳ್ತಂಗಡಿ: ಶಕ್ತಿ ಕೇಂದ್ರಗಳಿಗೆ ಪೂಂಜ ಭೇಟಿ
ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು 14 ಶಕ್ತಿಕೇಂದ್ರಗಳಿಗೆ ಭೇಟಿ ನೀಡಿ ಸಭೆ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಎ. 17ರಂದು ನಾಮಪತ್ರ ಸಲ್ಲಿಸಲಿದ್ದು, ಚಿತ್ರ ನಟ ವಿಜಯರಾಘವೇಂದ್ರ ಬೆಳ್ತಂಗಡಿಗೆ ಆಗಮಿಸಿದ್ದಾರೆ. ಪುತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರು ಬೆಳಾಲು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದ್ದಾರೆ. ಚಾರ್ಮಾಡಿ, ಕೊಕ್ಕಡ, ನಾರಾವಿ ಚೆಕ್ ಪೋಸ್ಟ್‌ಗಳಿಗೆ ಚುನಾವಣ ಖರ್ಚು ವೆಚ್ಚಗಳ ಪರಿವೀಕ್ಷಕರಾದ ಸುನಿಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಗಳೂರು: ಖಾದರ್‌ರಿಂದ ಗಣ್ಯರ ಭೇಟಿ
ಕಾಂಗ್ರೆಸ್ ಅಭ್ಯರ್ಥಿ ಯು.ಟಿ.ಖಾದರ್ ವಿವಿಧ ಕ್ಷೇತ್ರದ ಗಣ್ಯರ ಜತೆಗೆ ಇಂದು ಮಾತುಕತೆ ನಡೆಸಿದರು. ಸಂಜೆ ತುಂಬೆ ಹಾಗೂ ಮುಕ್ಕಚ್ಚೇರಿಯಲ್ಲಿ ಬೂತ್ ಮಟ್ಟದ ಸಭೆಯಲ್ಲಿ ಭಾಗವಹಿಸಿದರು. ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಅವರು ವಿವಿಧ ದೇವಾಲಯಗಳಿಗೆ ಭೇಟಿ ನೀಡಿದರಲ್ಲದೇ ಮಂಗಳೂರಿನ ಪಕ್ಷದ ಸಭೆಯಲ್ಲಿ ಪಾಲ್ಗೊಂಡರು. ಬಳಿಕ ಮುಡಿಪು ವ್ಯಾಪ್ತಿಯಲ್ಲಿ ಮನೆ ಮನೆ ಭೇಟಿ ಪ್ರಚಾರ ಆರಂಭಿಸಿದರು. ಮಂಗಳೂರು ನಗರ ದಕ್ಷಿಣ ಬಿಜೆಪಿಯ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರು ಕ್ಷೇತ್ರದಲ್ಲಿ ಪ್ರಮುಖ ಕಾರ್ಯಕರ್ತರ ಸಭೆ ನಡೆಸಿದರು. ಜೆಡಿಎಸ್‌ಸುಮತಿ ಹೆಗ್ಡೆ ಅವರಿಗೆ ಟಿಕೆಟ್ ಘೋಷಿಸಿದ್ದರೆ, ಕಾಂಗ್ರೆಸ್ ಇನ್ನೂ ಅಭ್ಯರ್ಥಿಯನ್ನು ಘೋಷಿಸಬೇಕಿದೆ. ಬೆಳಗ್ಗೆ ನೆರೆಮನೆಗೆ ಸಂಜೆ ಮರಳಿ ಮನೆಗೆ
ಮೂಲ್ಕಿ-ಮೂಡುಬಿದಿರೆ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಶುಕ್ರವಾರ ಬೆಳಗ್ಗೆ ಕೆಮ್ರಾಲ್ ಗ್ರಾ.ಪಂ.ನ ಕಾಂಗ್ರೆಸ್ ಬೆಂಬಲಿತ ಸದಸ್ಯ ರಾಜೇಶ್ ಶೆಟ್ಟಿ ಹಾಗೂ ಕಾಂಗ್ರೆಸ್‌ನ ತೋಡಾರಿನ ಸಂದೀಪ್ ಶೆಟ್ಟಿ ಅವರು ಬಿಜೆಪಿ ಸೇರ್ಪಡೆಗೊಂಡಿದ್ದರು. ಆದರೆ ಸಂಜೆ ವೇಳೆಗೆ ರಾಜೇಶ್ ಶೆಟ್ಟಿ ವಾಪಸು ಕಾಂಗ್ರೆಸ್‌ಗೆ ಮರು ಸೇರ್ಪಡೆಯಾದರು.