Advertisement

ಮೇಟಿಗೆ ಅನಾರೋಗ್ಯ: ಬೆಂಗಳೂರು ಆಸ್ಪತ್ರೆಗೆ ದಾಖಲು

10:37 PM Nov 29, 2019 | Team Udayavani |

ಬಾಗಲಕೋಟೆ: ಮಾಜಿ ಸಚಿವ ಎಚ್‌.ವೈ.ಮೇಟಿ ಅವರಿಗೆ ತೀವ್ರ ಅನಾರೋಗ್ಯ ಉಂಟಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಏರ್‌ ಆ್ಯಂಬುಲೆನ್ಸ್‌ ಮೂಲಕ ಬಾಗಲಕೋಟೆ ಯಿಂದ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಪಿತ್ತಕೋಶದಲ್ಲಿ ಹರಳು ಆಗಿರುವ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಿಂದ ಏರ್‌ ಆ್ಯಂಬುಲೆನ್ಸ್‌ ತರಿಸಿ, ಬೆಂಗಳೂರಿಗೆ ಕರೆದೊಯ್ಯಲಾಯಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next