Advertisement

ದೇವನಹಳ್ಳಿ ಏರ್‌ಪೋರ್ಟ್‌ಗೆ ಮೆಟ್ರೋ ನಮ್ಮ ಗುರಿ

11:58 AM Jun 18, 2017 | Team Udayavani |

ಬೆಂಗಳೂರು: ಹೊರವರ್ತುಲ ರಸ್ತೆ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಮೆಟ್ರೋ ಸೇವೆ ವಿಸ್ತರಣೆ ನಮ್ಮ ಮುಂದಿನ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Advertisement

ನಮ್ಮ ಮೆಟ್ರೋ-1 ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಎರಡನೇ ಹಂತದ ಮೆಟ್ರೋ ಮಾರ್ಗಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. 26450 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಇದು ಪೂರ್ಣಗೊಂಡರೆ ಪ್ರತಿನಿತ್ಯ 18 ಲಕ್ಷ ಪ್ರಯಾಣಿಕರು ಸಂಚರಿಸಲಿದ್ದಾರೆ.

ಎರಡನೇ ಹಂತ ಎ ಯೋಜನೆಯಡಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ನಗರ ಹೊರವರ್ತುಲ ರಸ್ತೆ ಮಾರ್ಗದಲ್ಲಿ ಮೆಟ್ರೋ ಸೇವೆ ವಿಸ್ತರಿಸಲು ಚಿಂತಿಸಲಾಗುತ್ತಿದೆ. ಈ ಎಲ್ಲ ಮಾರ್ಗ ಪೂರ್ಣಗೊಂಡರೆ ನಗರದ ಸಂಚಾರ ದಟ್ಟಣೆ ಗಣನೀಯವಾಗಿ ತಗ್ಗಲಿದೆ ಎಂದು ಹೇಳಿದರು.

ಮೊದಲ ಹಂತ ಯಶಸ್ವಿಯಾಗಿ ಪೂರ್ಣಗೊಂಡಿರುವ ಕೀರ್ತಿ ಬೆಂಗಳೂರು ನಾಗರಿಕರಿಗೆ ಸಲ್ಲುತ್ತದೆ. ಯೋಜನೆ ಅನುಷ್ಟಾನಕ್ಕೆ ಸಹಕಾರ ನೀಡಿದ ನಗರದ ನಾಗರಿಕರಿಗೆ ವೈಯಕ್ತಿಕವಾಗಿ ಹಾಗೂ ಸರ್ಕಾರದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಎಸ್ಕಲೇಟರ್‌ಗೆ ಸಿಲುಕಿದ ಸಿಬ್ಬಂದಿಗೆ ಕಾಲು ಮುರಿತ 
ಬೆಂಗಳೂರು:
ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಎಸ್ಕಲೇಟರ್‌ನಲ್ಲಿ ಮೆಟ್ರೋ ಪ್ರಾಜೆಕ್ಟ್ ಇನ್ಸ್‌ಪೆಕ್ಟರ್‌ವೊಬ್ಬರ ಕಾಲು ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. 
ಅಳಗಪ್ಪನ್‌ (30) ಗಾಯಗೊಂಡವರು. ಅವರನ್ನು ಸೆಂಟ್‌ಜಾನ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಆದರೆ, ಘಟನೆ ಕುರಿತು ಯಾವುದೇ ದೂರುಗಳು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಎಸ್ಕಲೇಟರ್‌ ತಪಾಸಣೆ ನಡೆಸಿ ವರದಿ ನೀಡುವಂತೆ ಹಿರಿಯ ಅಧಿಕಾರಿಗಳು ಪ್ರಾಜೆಕ್ಟ್ ಇನ್ಸ್‌ಪೆಕ್ಟರ್‌ಗೆ ಸೂಚಿಸಿದ್ದರು. ಅದರಂತೆ ಇನ್ಸ್‌ಪೆಕ್ಟರ್‌ ಅಳಗಪ್ಪನ್‌ ಮೂವರು ಸಿಬ್ಬಂದಿ ಜತೆ ಎಸ್ಕಲೇಟರ್‌ ತಪಾಸಣೆ ನಡೆಸುತ್ತಿದ್ದರು.

ಈ ವೇಳೆ ಅಳಗಪ್ಪನ್‌ ಆಯಾ ತಪ್ಪಿ ಬಿದಿದ್ದು, ಅವರ ಬಲಗಾಲು ಎಸ್ಕಲೇಟರ್‌ಗೆ ಸಿಲುಕಿದೆ. ಹೀಗಾಗಿ ಕಾಲು ಮುರಿದಿದೆ. ಸ್ಥಳದಲ್ಲಿದ್ದ ಇತರೆ ಸಿಬ್ಬಂದಿ ಕೂಡಲೇ ಅಳಗಪ್ಪನ್‌ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಸೆಂಟ್‌ ಜಾನ್ಸ್‌ ಆಸ್ಪತ್ರೆಗೆ ದಾಖಲಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next