ನವದೆಹಲಿ: ಭಾರತದ ರೈಲ್ವೆ ಮತ್ತು ಮೆಟ್ರೋ ಕ್ಷೇತ್ರದಲ್ಲಿ ಮೈಲುಗಲ್ಲು ಸ್ಥಾಪಿಸಿ ಮೆಟ್ರೋ ಮ್ಯಾನ್ ಎಂದು ಪ್ರಸಿದ್ದಿಯಾದ ಇ.ಶ್ರೀಧರನ್ ಅವರು ಕೇರಳ ಚುನಾವಣೆಗೂ ಮುನ್ನ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಕೋವಿಡ್ ಸೋಂಕು ಹೆಚ್ಚಳ: ಮಹಾರಾಷ್ಟ್ರದ ಅಕೋಲಾ, ಅಮರಾವತಿಯಲ್ಲಿ ಮತ್ತೆ ಲಾಕ್ ಡೌನ್?
ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ನೇತೃತ್ವದಲ್ಲಿ ಫೆಬ್ರುವರಿ 21ರಂದು ನಡೆಯಲಿರುವ ವಿಜಯ್ ಯಾತ್ರೆಯ ಸಂದರ್ಭದಲ್ಲಿ ಇ.ಶ್ರೀಧರನ್ ಬಿಜೆಪಿ ಪಕ್ಷಕ್ಕೆ ಔಪಚಾರಿಕವಾಗಿ ಸೇರ್ಪಡೆಯಾಗಲಿದ್ದಾರೆ.
88 ವರ್ಷದ ಇ.ಶ್ರೀಧರನ್ ಅವರು ಮೇ ತಿಂಗಳಿನಲ್ಲಿ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಅಖಾಡಕ್ಕಿಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭಾರತದ “ಮೆಟ್ರೋ ಮ್ಯಾನ್” ಎಂದೇ ಹೆಸರಾಗಿದ್ದ ಇ.ಶ್ರೀಧರನ್ ಅವರು 2011ರಲ್ಲಿ ದೆಹಲಿ ಮೆಟ್ರೋದ ಉನ್ನತ ಹುದ್ದೆಯಿಂದ ನಿವೃತ್ತಿಯಾಗಿದ್ದರು. ಚುನಾವಣೆಯ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ವಿಜಯ್ ಯಾತ್ರೆ ಕಾಸರಗೋಡಿನಿಂದ ಆರಂಭಗೊಳ್ಳಲಿದ್ದು, ಮಾರ್ಚ್ ಮೊದಲ ವಾರದಲ್ಲಿ ತಿರುವನಂತಪುರದಲ್ಲಿ ಕೊನೆಗೊಳ್ಳಲಿದೆ.