ತಿರುವನಂತಪುರ: ದಿಲ್ಲಿ ಮೆಟ್ರೋ ರೈಲುಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಲು ಮುಂದಾಗಿರುವ ದಿಲ್ಲಿ ರಾಜ್ಯ ಸರಕಾರದ ಪ್ರಸ್ತಾವನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಮೆಟ್ರೋ ಮ್ಯಾನ್ ಎಂದೇ ಖ್ಯಾತಿಯಾಗಿರುವ, ದಿಲ್ಲಿ ಮೆಟ್ರೋ ರೈಲು ನಿಗಮದ ಮಾಜಿ ಮುಖ್ಯಸ್ಥ ಇ. ಶ್ರೀಧರನ್, ಈ ಪ್ರಸ್ತಾವನೆಯನ್ನು ಒಪ್ಪದಿರುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಿಸಿದ್ದಾರೆ.
ದಿಲ್ಲಿಯಲ್ಲಿ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಾರ್ಟಿಯು (ಆಪ್) ಮಹಿಳಾ ಪ್ರಯಾಣಿಕರಿಗೆ ನೆರವು ನೀಡುವ ಉದ್ದೇಶ ಹೊಂದಿದ್ದರೆ, ಪ್ರಯಾಣದ ಮಾಸಿಕ ಟಿಕೆಟ್ ಮೊತ್ತವನ್ನು ಮಹಿಳೆಯರ ಖಾತೆಗಳಿಗೆ ವರ್ಗಾವಣೆ ಮಾಡಲಿ. ಅದನ್ನು ಬಿಟ್ಟು ಅವರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡುವುದು ಆರ್ಥಿಕ ದೃಷ್ಟಿಯಿಂದ ಹಿತಕರವಾದ ನಿರ್ಧಾರವಲ್ಲ ಎಂದಿದ್ದಾರೆ.
Advertisement