Advertisement

ಕೊಹ್ಲಿ ಏಕದಿನ ಕ್ರಿಕೆಟ್‌ನ ಸಾರ್ವಕಾಲಿಕ ಶ್ರೇಷ್ಠ ಆಟಗಾರ: ಕ್ಲಾರ್ಕ್‌

06:40 AM Feb 09, 2018 | Team Udayavani |

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧ 3ನೇ ಏಕದಿನ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ವಿರಾಟ್‌ ಕೊಹ್ಲಿ ವೃತ್ತಿ ಜೀವನದಲ್ಲಿ 34ನೇ ಶತಕ ದಾಖಲಿಸಿ ಅನೇಕ ದಾಖಲೆಗಳನ್ನು ನಿರ್ಮಿಸಿದ್ದಾರೆ. ಕೊಹ್ಲಿ ಆಟಕ್ಕೆ ಟ್ವೀಟರ್‌ನಲ್ಲಿ ಆಸ್ಟ್ರೇಲಿಯಾದ ಮೈಕಲ್‌ ಕ್ಲಾರ್ಕ್‌, ಡೇವಿಡ್‌ ವಾರ್ನರ್‌ ಸೇರಿದಂತೆ ಹಲವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Advertisement

ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಮೈಕಲ್‌ ಕ್ಲಾರ್ಕ್‌ “ವಿರಾಟ್‌ ಕೊಹ್ಲಿ ಏಕದಿನ ಕ್ರಿಕೆಟ್‌ನ ಸಾರ್ವಕಾಲಿಕ ಶ್ರೇಷ್ಠ ಆಟಗಾರ’ ಎಂದು ಟ್ವೀಟ್‌ ಮಾಡಿದ್ದಾರೆ. ಇದಕ್ಕೆ ಕ್ರೀಡಾಭಿಮಾನಿಗಳು ಭಾರೀ ಪ್ರಮಾಣದಲ್ಲಿ ಲೈಕ್‌ ಮತ್ತು ಪ್ರತಿಕ್ರಿಯೆಯನ್ನು ನೀಡಿದ್ದಾರೆ.

3ನೇ ಏಕದಿನದಲ್ಲಿ ಕೊಹ್ಲಿ 159 ಎಸೆತಕ್ಕೆ ಅಜೇಯ 160 ರನ್‌ ಬಾರಿಸಿದ್ದರು. ಈ ಪಂದ್ಯದಲ್ಲಿ ಭಾರತ 124 ರನ್‌ ಅಂತರದಿಂದ ಗೆದ್ದು, 6 ಪಂದ್ಯಗಳ ಏಕದಿನ ಸರಣಿಯಲ್ಲಿ 3-0 ಮುನ್ನಡೆ ಪಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next