ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದಂತೆ ಕನಿಷ್ಠ ವೇತನ ನೀಡುಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರದಿಂದ ಆರಂಭಿಸಿರುವ ಅಹೋರಾತ್ರಿ ಧರಿಣಿ ಇಂದು ಗುರುವಾರವೂ ಮುಂದುವರಿದಿದೆ.
ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿರುವ ಸಾವಿರಾರು ಕಾರ್ಯಕರ್ತೆಯರು ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದರು. ಬಿಗಿ ಪೊಲೀಸ್ ಬಂದೋಬಸ್ತ್ ನಡುವೆಯೂ ಬ್ಯಾರಿಕೇಡ್‌ಗಳನ್ನು ತಳ್ಳಿ ಮುಂದಕ್ಕೆ ಸಾಗಲು ಯತ್ನಿಸಿದರು. ಮಹಿಳಾ ಪೊಲೀಸ್ ಸಿಬಂದಿ ಪ್ರತಿಭಟನಾ ನಿರತರನ್ನು ತಡೆಯಲು ಹರ ಸಾಹಸ ಪಟ್ಟರು.
ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿರುವ ಸಾವಿರಾರು ಕಾರ್ಯಕರ್ತೆಯರು ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದು ,ರೈಲ್ವೇ ಸ್ಟೇಷನ್‌ನಿಂದ ಆನಂದ್ ರಾವ್ ಸರ್ಕಲ್ ಕೆ.ಆರ್.ಸರ್ಕಲ್, ಎಂ.ಎಸ್.ಬಿಲ್ಡಿಂಗ್ ಮೂಲಕ ವಿಧಾನಸೌಧದತ್ತ ಪಾದಯಾತ್ರೆಯಲ್ಲಿ ತೆರಳಿದರು. ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ವಿಧಾನ ಸೌಧ ಬಳಿ ತೆರಳದಂತೆ ತಡೆ ಒಡ್ಡಿದರು.
ತಳ್ಳಾಟ ನೂಕಾಟದ ವೇಳೆ ಇಬ್ಬರು ಕಾರ್ಯಕರ್ತೆಯರು ಅಸ್ವಸ್ಥಗೊಂಡಿದ್ದಾರೆ. ಕಮಲಮ್ಮ ಮತ್ತು ಮಂಗಳ ಎನ್ನುವವರು ಅಸ್ವಸ್ಥಗೊಂಡಿದ್ದು ಅವರನ್ನು ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಸಿಯೂಟ ತಯಾರಕರನ್ನು ಸಂಘಟಿತ ಕಾರ್ಮಿಕರಂತೆ ಪರಿಗಣಿಸಿ ಕನಿಷ್ಠ ವೇತನ 18 ಸಾವಿರ ರೂ.ಗಳನ್ನು ನೀಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯಲು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.