Advertisement

ಬಿಸಿಯೂಟ ಸಿಬಂದಿ ಗೌರವ ಸಂಭಾವನೆ ಹೆಚ್ಚಳ: ಸಚಿವ ಸುನಿಲ್‌ ಕುಮಾರ್‌

01:18 AM Feb 24, 2023 | Team Udayavani |

ಬೆಂಗಳೂರು: ಸರಕಾರಿ ಶಾಲೆಗಳಲ್ಲಿ 97,371 ಅಡುಗೆ ಸಿಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಅನಂತರ ಅವರ ಗೌರವ ಸಂಭಾವನೆಯನ್ನು ಹೆಚ್ಚಿಸಲಾಗಿದೆ ಎಂದು ಇಂಧನ ಹಾಗೂ ಕನ್ನಡ-ಸಂಸ್ಕೃತಿ ಇಲಾಖೆ ಸಚಿವ ಸುನಿಲ್‌ ಕುಮಾರ್‌ ಹೇಳಿದ್ದಾರೆ.

Advertisement

ಶಾಲಾ ಶಿಕ್ಷಣ ಹಾಗೂ ಸಾಕ್ಷರತ ಸಚಿವ ಬಿ.ಸಿ. ನಾಗೇಶ್‌ ಪರವಾಗಿ ಶಾಸಕ ಸಾ.ರಾ. ಮಹೇಶ್‌ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯ ಅಡುಗೆಯವರಿಗೆ ಮಾಸಿಕ 3,700 ರೂ., ಸಹಾಯಕ ಅಡುಗೆಯವರಿಗೆ 3,600 ರೂ. ಸಂಭಾವನೆ ನೀಡಲಾಗುತ್ತಿದೆ.

2022-23ನೇ ಶೈಕ್ಷಣಿಕ ವರ್ಷದಿಂದ ಅನ್ವಯವಾಗುವಂತೆ ಮಧ್ಯಾಹ್ನ ಉಪಾಹಾರ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಅಡುಗೆ ಸಿಬಂದಿ ಗೌರವ ಸಂಭಾವನೆಯನ್ನು 1,000 ರೂ. ಹೆಚ್ಚಳ ಮಾಡಲಾಗಿದೆ. ಕನಿಷ್ಠ ವೇತನ ಜಾರಿ ಮಾಡುವುದಕ್ಕೆ ಸಾಕಷ್ಟು ಇತಿಮಿತಿಗಳಿವೆ. ಈ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next