Advertisement

ತಗ್ಗು ಪ್ರದೇಶಗಳಿಗೆ ಮಧ್ಯರಾತ್ರಿ ಡಿಸಿ ಭೇಟಿ

07:43 AM Aug 11, 2019 | sudhir |

ಬ್ರಹ್ಮಾವರ: ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ಶುಕ್ರವಾರ ಮಧ್ಯ ರಾತ್ರಿ 12.30ರಿಂದ 2.30ರ ವರೆಗೆ ಬ್ರಹ್ಮಾವರ ತಾಲೂಕು ವ್ಯಾಪ್ತಿಯ ತಗ್ಗು ಪ್ರದೇಶಗಳಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ಭಾರೀ ಮಳೆ ಬೀಳುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರಿಗೆ ಅಪಾಯವಾಗುವ ಸಾಧ್ಯತೆ ಇರುವುದರಿಂದ ಪರಿಶೀಲಿಸಿದರು.

Advertisement

ಉಪ್ಪೂರು, ಕುದ್ರುಬೆಟ್ಟು, ನಡುಬೆಟ್ಟು, ಬಾವಲಿಕುದ್ರು ಪ್ರದೇಶಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಈ ಭಾಗಗಳು ತಗ್ಗು ಪ್ರದೇಶದಲ್ಲಿದ್ದು ಭಾರೀ ಮಳೆಯಿಂದ ನೆರೆ ಪೀಡಿತವಾಗುವ ಸಾಧ್ಯತೆಗಳಿದೆ. ಇಲ್ಲಿನ ಜನರ ಜೊತೆ ಸಂಪರ್ಕವಿಟ್ಟುಕೊಂಡು, ನೆರೆ ಸಂದರ್ಭದಲ್ಲಿ ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಅಗತ್ಯ ಉಪಕರಣಗಳು ಹಾಗೂ ಪರಿಹಾರ ಸಾಮಗ್ರಿಗಳನ್ನು ಸಿದ್ಧವಾಗಿಟ್ಟುಕೊಂಡಿರುವಂತೆ ಬ್ರಹ್ಮಾವರ ತಹಶೀಲ್ದಾರ್‌ರಿಗೆ ಸೂಚಿಸಿದರು.

ಅನಂತರ ಬ್ರಹ್ಮಾವರ ತಹ ಶೀಲ್ದಾರ್‌ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ತಹಶೀಲ್ದಾರ್‌ ಕಚೇರಿ ಯಲ್ಲಿ ತೆರೆದಿರುವ 24×7 ಸಹಾಯ ನೀಡುವ ಕಂಟ್ರೋಲ್ ರೂಂ ಪರಿಶೀಲಿಸಿದರು.

ಎಲ್ಲ ಸಿಬಂದಿ ಕರ್ತವ್ಯದಲ್ಲಿ ತೊಡಗಿದ್ದು, ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಜಾರಿಯಲ್ಲಿರುವ ಕಾರಣ, ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸಲು ಎಲ್ಲ ಸಿಬಂದಿ ಸನ್ನದ್ಧರಿರುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಎಸ್‌.ಪಿ. ನಿಶಾ ಜೇಮ್ಸ್‌, ಬ್ರಹ್ಮಾವರ ತಹಶೀಲ್ದಾರ್‌ ಕಿರಣ್‌ ಗೌರಯ್ಯ, ಕಂದಾಯ ನೀರೀಕ್ಷಕರು, ಗ್ರಾಮ ಲೆಕ್ಕಿಗರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next