Advertisement

ಸ್ವಂತ ಸ್ಥಳಗಳಿಗೆ ತೆರಳಿದ ವಲಸೆ ಕಾರ್ಮಿಕರು

04:33 PM Apr 27, 2020 | mahesh |

ಅರಸೀಕೆರೆ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ನಗರದ ನಿರಾಶ್ರಿತ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಹೊರ ಜಿಲ್ಲೆಯ ಕೂಲಿ ಕಾರ್ಮಿಕರನ್ನು ಸರ್ಕಾರದ ಆದೇಶದ ಮೇರೆಗೆ ತಾಲೂಕು ಆಡಳಿತದಿಂದ ಅವರ ಸ್ವಂತ ಊರುಗಳಿಗೆ ಕಳುಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್‌ ಸಂತೋಷ್‌ ಕುಮಾರ್‌ ಕಲಬುರಗಿ ಜಿಲ್ಲೆಯ ಚಿಂಚೋಳಿ, ರಾಯಚೂರು, ಬೆಳಗಾವಿ, ವಿಜಯಪುರ, ಗದಗ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಮೈಸೂರು, ಮಂಡ್ಯ ಜಿಲ್ಲೆಯಿಂದ ಕೂಲಿ ಕೆಲಸಕ್ಕೆ ಆಗಮಿಸಿದ್ದ 84 ಮಂದಿ ವಲಸೆ ಕಾರ್ಮಿಕರನ್ನು ಸರ್ಕಾರದ
ಆದೇಶದನ್ವಯ ಅವರ ಸ್ವಂತ ಊರುಗಳಿಗೆ ಕೆಎಸ್‌ಆರ್‌ ಟಿಸಿ ಬಸ್‌ಗಳಲ್ಲಿ ಅಗತ್ಯ ಸೌಲಭ್ಯ ನೀಡಿ ಕಳುಹಿಸಲಾಗುತ್ತಿದೆ ಎಂದು ತಿಳಿಸಿದರು. ಎಲ್ಲಾ 84 ಮಂದಿ ಕಾರ್ಮಿಕರಿಗೆ ನಗರದ ಸರ್ಕಾರಿ ಜೆ.ಸಿ.ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿದ್ದು, ಕೋವಿಡ್ ಲಕ್ಷಣಗಳಿಲ್ಲ ಎಂದು ದೃಢೀಕರಿಸಲಾಗಿದೆ. ಮಾಸ್ಕ್, ಸ್ಯಾನಿಟೈಸರ್‌, ಉಪಾಹಾರ, ಕುಡಿಯುವ ನೀರು ನೀಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಒಂದು ಬಸ್‌ ನಲ್ಲಿ 21 ಮಂದಿ ಕಾರ್ಮಿಕರನ್ನು ಕಳುಹಿಸಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಾಲಯ್ಯ, ಕಾರ್ಮಿಕ ಇಲಾಖೆ ನಿರೀಕ್ಷಕರಾದ ಪ್ರಭಾಕರ್‌ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶಂಕರಮೂರ್ತಿ, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್‌ ಸಿಬ್ಬಂದಿ ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next