Advertisement

Pakistan; ಪೊಲೀಸ್ ಠಾಣೆ ಮೇಲೆ ಉಗ್ರರ ದಾಳಿ; ಹತ್ತು ಪೊಲೀಸರ ದುರ್ಮರಣ

11:12 AM Feb 05, 2024 | Team Udayavani |

ಇಸ್ಲಮಾಬಾದ್: ಪೊಲೀಸ್ ಠಾಣೆಯ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಹತ್ತು ಮಂದಿ ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ ಘಟನೆ ಪಾಕಿಸ್ತಾನದ ಡೇರಾ ಇಸ್ಮಾಯಿಲ್ ಖಾನ್ ನ ಛಾದ್ವಾನ್ ಪೊಲೀಸ್ ಠಾಣೆಯಲ್ಲಿ ರವಿವಾರ ತಡರಾತ್ರಿ ನಡೆದಿದೆ.

Advertisement

ಪಾಕಿಸ್ತಾನದಲ್ಲಿ ಫೆಬ್ರವರಿ 8ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಯ ಮೂರು ದಿನ ಮೊದಲು ಈ ಉಗ್ರ ದಾಳಿ ನಡೆದಿದೆ.

“ಬೆಳಿಗ್ಗೆ 3 ಗಂಟೆಯ ಸುಮಾರಿಗೆ ಉಗ್ರರು ಪೊಲೀಸ್ ಠಾಣೆಯ ಮೇಲೆ ಸ್ನೈಪರ್‌ಗಳ ಗುಂಡಿನ ದಾಳಿ ನಡೆಸಿ ನಂತರ ಕಟ್ಟಡಕ್ಕೆ ಪ್ರವೇಶಿಸಿದರು. ಕಟ್ಟಡಕ್ಕೆ ಪ್ರವೇಶಿಸಿದ ನಂತರ ಭಯೋತ್ಪಾದಕರು ಹ್ಯಾಂಡ್ ಗ್ರೆನೇಡ್‌ ಗಳನ್ನು ಬಳಸಿದ್ದು ಪೊಲೀಸರಿಗೆ ಹೆಚ್ಚಿನ ಸಾವುನೋವುಗಳನ್ನು ಉಂಟುಮಾಡಿತು” ಎಂದು ಪಾಕಿಸ್ತಾನದ ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಕಳೆದ ಕೆಲವು ದಿನಗಳಲ್ಲಿ ಖೈಬರ್ ಪಖ್ತುಂಖ್ವಾ ಪ್ರದೇಶ ಮತ್ತು ಬಲೂಚಿಸ್ತಾನದಲ್ಲಿ ಭಯೋತ್ಪಾದಕ ದಾಳಿಯ ಘಟನೆಗಳು ಹೆಚ್ಚಿವೆ

Advertisement

Udayavani is now on Telegram. Click here to join our channel and stay updated with the latest news.

Next