ನವದೆಹಲಿ: ಕೋವಿಡ್ 19 ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವ ಭಾರತದ ಅಥ್ಲೀಟ್ ಕ್ಷೇತ್ರದ ದಂತಕಥೆ ಮಿಲ್ಖಾ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದ್ದು, ಸಿಂಗ್ ಅವರ ನಿಧನ ಸುದ್ದಿ ಸುಳ್ಳು ಎಂದು ಚಂಡೀಗಢದ ಪಿಜಿಐಎಂಇಆರ್ ನಿರ್ದೇಶಕರು ಶನಿವಾರ(ಜೂನ್ 05) ತಿಳಿಸಿದ್ದಾರೆ.
ಇದನ್ನೂ ಓದಿ:ಪೆಟ್ರೋಲ್, ಡೀಸೆಲ್ ದರ ಏರಿಸುವುದು, ಇಳಿಸುವುದು ಕೇಂದ್ರದ ತೀರ್ಮಾನ: ಈಶ್ವರಪ್ಪ
ಮಿಲ್ಖಾ ಸಿಂಗ್ (91ವರ್ಷ) ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಕೋವಿಡ್ 19 ಸೋಂಕಿನ ವಿರುದ್ಧ ಹೋರಾಡುತ್ತಿರುವ ಅವರನ್ನು ತೀವ್ರ ನಿಗಾ ಘಟಕದಲ್ಲಿ ಮೂವರು ವೈದ್ಯರ ತಂಡ ನಿರಂತರವಾಗಿ ಮೇಲ್ವಿಚಾರಣೆ ನಡೆಸುತ್ತಿದೆ ಎಂದು ವರದಿ ತಿಳಿಸಿದೆ.
ಮೆಡಿಕಲ್ ಇನ್ಸ್ ಟಿಟ್ಯೂಟ್ ನಿರ್ದೇಶಕ ಜಗತ್ ರಾಮ್ ಅವರು ಇಂದು ಬೆಳಗ್ಗೆ ಸಿಂಗ್ ಅವರ ಆರೋಗ್ಯಕ್ಕೆ ಸಂಬಂಧಿಸಿದ ವಿಡಿಯೋ ಬಿಡುಗಡೆ ಮಾಡಿ ಮಾಹಿತಿ ನೀಡಿದ್ದರು. ಜೂನ್ 3ರಂದು ಮಿಲ್ಖಾ ಸಿಂಗ್ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುವುದಾಗಿ ತಿಳಿಸಿದ್ದರು.
ಕೋವಿಡ್ ಸೋಂಕಿಗೆ ಒಳಗಾಗಿದ್ದ ಮಿಲ್ಖಾ ಸಿಂಗ್ ಅವರು ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದರಿಂದ ವಿಡಿಯೋ ಮೂಲಕ ಸ್ಪಷ್ಟನೆ ನೀಡುವ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ರಾಮ್ ಮಾಹಿತಿ ನೀಡಿದ್ದಾರೆ.