Advertisement

Manipal ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

01:38 AM Jul 02, 2024 | Team Udayavani |

ಮಣಿಪಾಲ: ವ್ಯಕ್ತಿಯೊಬ್ಬರ ಎಸ್‌ಬಿ ಖಾತೆಯಿಂದ ಮತ್ತೊಂದು ಖಾತೆಗೆ ಲಕ್ಷಾಂತರ ರೂ. ವರ್ಗಾವಣೆಗೊಂಡ ಘಟನೆ ನಡೆದಿದೆ.

Advertisement

ಕಾರ್ಕಳ ಪಳ್ಳಿ ನಿವಾಸಿ ಡಾ| ಗೋಪಿ ನಾಥ್‌ ಅವರು ಮಣಿಪಾಲದ ಐಸಿಐಸಿಐ ಬ್ಯಾಂಕ್‌ನಲ್ಲಿ ಎಸ್‌ಬಿ ಖಾತೆ ಹೊಂದಿದ್ದರು. ಅದರಿಂದ ಜ. 27ರಿಂದ ಜೂ.20ರ ವರೆಗೆ ಸುಮಾರು 2,08,004ರೂ.ಗಳು ಸುಮಾರು 177 ಸಲ ಬೇರೆ ಬೇರೆ ಕಂತು ಗಳಲ್ಲಿ ಗೂಗಲ್‌ ಪೇ ಎಂಬ ಖಾತೆಗೆ ವರ್ಗಾವಣೆಯಾಗಿದೆ.

ಈ ಬಗ್ಗೆ ಸಂಬಂಧ ಪಟ್ಟ ಬ್ಯಾಂಕ್‌ಗೆ ಹೋಗಿ ಅಧಿಕಾರಿಗಳನ್ನು ವಿಚಾರಿಸಿದಾಗ ಒಟಿಪಿ-ಡೆಬಿಟ್‌ ಕಾರ್ಡ್‌ ಮೂಲಕ ಹಣ ವರ್ಗಾ ವಣೆಯಾಗಿದೆ ಎಂದು ತಿಳಿಸಿದ್ದಾರೆ.

ಆದರೆ ಡಾ| ಗೋಪಿನಾಥ್‌ ಅವರಿಗೆ ವರ್ಗಾವಣೆಗೆ ಸಂಬಂಧಪಟ್ಟ ಯಾವುದೇ ಒಟಿಪಿ ಅಥವಾ ಸಂದೇಶ ಗಳು ಬಂದಿಲ್ಲ. ಯಾರೋ ಅಪರಿಚಿತ ವ್ಯಕ್ತಿ ಅವರ ಗಮನಕ್ಕೆ ಬಾರದೆ ಅವರ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾಯಿಸಿದ್ದಾರೆ ಎಂದು ಅವರು ಮಣಿಪಾಲ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next