“ಮಿಂಚು ಹುಳ’ ಎಂಬ ಸಿನಿಮಾವೊಂದು ಬಿಡುಗಡೆಯ ಹಂತಕ್ಕೆ ಬಂದಿದ್ದು, ಅಕ್ಟೋಬರ್ 4ರಂದು ತೆರೆಕಾಣುತ್ತಿದೆ.
ಮಹೇಶ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಡಾ.ರಾಜ್ ಅವರ ಸಹೋದರ ವರದಪ್ಪನವರ ಮೊಮ್ಮಗ ಪೃಥ್ವಿರಾಜ್ ಈ ಚಿತ್ರದಲ್ಲಿ ನಾಯಕರಾಗಿ ನಟಿಸಿದ್ದಾರೆ. ಚಿತ್ರವನ್ನು ಭೂನಿ ಪಿಕ್ಚರ್ಸ್ ಅಡಿ ರಾಜಗೋಪಾಲ್ ದೊಡ್ಡಹುಲ್ಲೂರು ಅವರು ಬಂಡವಾಳ ಹಾಕಿದ್ದು, ವಿಜಯ್ ಕುಮಾರ್ ಮತ್ತು ಅಬ್ದುಲ್ ರಫೀಕ್ ಉಲ್ಲಾ ಸಾಥ್ ನೀಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ವಿಶೇಷ ಪ್ರದರ್ಶನ ಆಯೋಜಿಸಿತ್ತು ಚಿತ್ರತಂಡ.
“ಗರ ಪ್ರದೇಶದಲ್ಲಿ ನಡೆಯುವ ಕಥೆ ಇದಾಗಿದ್ದು, ಬೇಜವಾಬ್ದಾರಿ ತಂದೆ ಹಾಗೂ ಮಗನ ನಡುವಿನ ಕಥೆ ಇದಾಗಿದ್ದು, ಆ ತಂದೆಯ ಬದುಕಿನ ಬದುಕಿನ ವೈರುದ್ಯ, ಅಪ್ಪ- ಮಕ್ಕಳು ಬಾಡಿಗೆ ಕಟ್ಟಲಾಗದೆ ಪಾಳು ಮನೆ ಸೇರಿದಾಗ, ಆ ಮನೆಯಲ್ಲಿ ವಿದ್ಯುತ್ ಇರುವುದಿಲ್ಲ. ಏನಾದರೂ ಮಾಡಿ ವಿದ್ಯುತ್ ಹಾಕಿಸಬೇಕೆಂದು, ಪೇಪರ್ ಏಜೆಂಟ್ ಸಹಾಯದಿಂದ ಕರೆಂಟ್ ಹಾಕಿಸಲು ಮುಂದಾಗುತ್ತಾನೆ. ಆದರೆ ಒಮ್ಮೆ ಆತ ಕೂಡಿಟ್ಟ ಹಣವನ್ನು ಇಲಿಯೊಂದು ಕಚ್ಚಿ ಹಾಕುತ್ತದೆ. ಮಿಂಚು ಹುಳುವೊಂದನ್ನು ನೋಡಿದ ಆ ಹುಡುಗನಿಗೆ ಹೊಸ ಆಲೋಚನೆ ಬಂದು, ವಿದ್ಯಾರ್ಥಿಯ ಬದುಕಿನಲ್ಲಿ ಹೊಸದಾರಿಗೆ ಅವಕಾಶ ಮಾಡಿಕೊಡುತ್ತದೆ, ಅದು ಏನು ಎಂಬುದೇ ಮಿಂಚುಹುಳು ಚಿತ್ರದ ಕಥಾಹಂದರ.
ನಿರ್ದೇಶಕ ಮಹೇಶ್ ಕುಮಾರ್ ಮಾತನಾಡಿ, ಅಕ್ಟೋಬರ್ 4 ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ಮುಖ್ಯವಾಗಿ ಈ ಚಿತ್ರ ಆಗಲು ಪುನೀತ್ ರಾಜ್ ಕುಮಾರ್ ಅವರೇ ಕಾರಣ. ಕನ್ನಡಕ್ಕೆ ಕಂಟೆಂಟ್ ಓರಿಯೆಂಟ್ ಚಿತ್ರಗಳ ಅಗತ್ಯತೆ ತುಂಬಾ ಇದೆ. ಅಂತಹ ಮತ್ತೂಂದು ಚಿತ್ರವಿದು ಎಂದರು. ವರದಪ್ಪ ಅವರ ಮೊಮ್ಮಗ ಪೃಥ್ವಿರಾಜ್ ಮಾತನಾಡಿ, ಚಿತ್ರದಲ್ಲಿ ನನ್ನದು ಮುಖ್ಯ ಪಾತ್ರಕ್ಕೆ ಪೂರಕವಾಗಿ ನಿಲ್ಲುವ ಪಾತ್ರ. ನಮ್ಮ ಚಿತ್ರಕ್ಕೆ ಎಲ್ಲರ ಸಹಕಾರ ಎಂದರು.
ವಿಶೇಷ ಪ್ರದರ್ಶನದಲ್ಲಿ ಸಂಗೀತ ನಿರ್ದೇಶಕ ಹಂಸಲೇಖಾ, ನಿರ್ದೇಶಕ ಶೇಷಾದ್ರಿ, ನಟಿ ಜಯಮಾಲಾ, ರಾಜ್ ಕುಟುಂಬ ಸದಸ್ಯರು ಭಾಗಿಯಾಗಿ, ಚಿತ್ರಕ್ಕೆ ಮೆಚ್ಚುಗೆ ಸೂಚಿಸಿದರು.