ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಗಣಿ ಸ್ಫೋಟದಲ್ಲಿ ಗಾಯಗೊಂಡಿದ್ದ ಭಾರತೀಯ ಸೇನೆಯ ಅಧಿಕಾರಿ ಮತ್ತು ಯೋಧ ಶನಿವಾರ ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಮತ್ತೊಬ್ಬ ಯೋಧ ಕೂಡ ಗಾಯಗೊಂಡಿದ್ದಾರೆ.
ನೌಶೇರಾ ಸೆಕ್ಟರ್‌ನ ಕಲಾಲ್ ಪ್ರದೇಶದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಇಬ್ಬರು ಸೇನಾ ಸಿಬ್ಬಂದಿಯನ್ನು ಲೆಫ್ಟಿನೆಂಟ್ ರಿಷಿ ಕುಮಾರ್ ಮತ್ತು ಸಿಪಾಯ್ ಮಂಜಿತ್ ಸಿಂಗ್ ಎಂದು ಗುರುತಿಸಲಾಗಿದೆ. ಸ್ಫೋಟಗೊಂಡ ತಕ್ಷಣ ಅವರನ್ನು ಹತ್ತಿರದ ಮಿಲಿಟರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗಿಲ್ಲ. ಗಾಯಗೊಂಡಿರುವ ಇನ್ನೋರ್ವ ಯೋಧ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ:ಬಡದೇಶಗಳಿಗೆ ಲಸಿಕೆ ಬೆಂಬಲ; ಜಿ-20 ಶೃಂಗಸಭೆಯ ಮೊದಲ ದಿನ ಸದಸ್ಯ ರಾಷ್ಟ್ರಗಳ ಒಪ್ಪಿಗೆ
ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಗಣಿ ಸ್ಫೋಟ ಸಂಭವಿಸಿದಾಗ ಗಡಿಯಾಚೆಯಿಂದ ಭಯೋತ್ಪಾದಕರ ಒಳ ನುಸುಳುವಿಕೆಯನ್ನು ಪರಿಶೀಲಿಸುವ ಕ್ರಮಗಳ ಭಾಗವಾಗಿ ಸೇನೆಯ ಗಸ್ತು ಕರ್ತವ್ಯದಲ್ಲಿತ್ತು.
ಸ್ಫೋಟ ಸಂಭವಿಸಿದ ಪ್ರದೇಶವು ಒಳನುಸುಳುವಿಕೆ ನಿರೋಧಕ ವ್ಯವಸ್ಥೆಯ ಭಾಗವಾಗಿ ಸೇನೆಯು ಹುದುಗಿಸಿದ ನೆಲಬಾಂಬ್ ಗಳಿಂದ ಕೂಡಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.