ಭಾರತೀನಗರ: ಮದ್ದೂರಿನಿಂದ ಮಳವಳ್ಳಿ ಕಡೆಗೆ ತೆರಳುತ್ತಿದ್ದ ಗಾರ್ಮೆಂಟ್ಸ್ ಕಾರ್ಮಿಕರಿದ್ದ ಮಿನಿ ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಮೀಪದ ಹುಣ್ಣನದೊಡ್ಡಿ ಗ್ರಾಮದ ಬಳಿ ನಡೆದಿದೆ.
ಕೊತ್ತಿಪುರ ಗ್ರಾಮದ ಸಚಿನ್ (26) ಮೃತಪಟ್ಟ ಬೈಕ್ ಸವಾರ.
ಮದ್ದೂರು ಸಮೀಪ ಸೋಮನಹಳ್ಳಿ ಕೈಗಾರಿಕಾ ಪ್ರದೇಶದ ಕರಣ್ ಗಾರ್ಮೆಂಟ್ಸ್ ನಿಂದ ಮಹಿಳಾ ಕಾರ್ಮಿಕರನ್ನು ಕರೆದುಕೊಂಡು ಹೋಗು ತ್ತಿದ್ದ ಮಿನಿ ಬಸ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಇದನ್ನೂ ಓದಿ:ರಷ್ಯಾ-ಉಕ್ರೇನ್ ಯುದ್ಧದ ನಡುವೆ ಮೂಕ ರೋದನ!
ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು,ಬಸ್ ಚಾಲಕನಿಗೆ ಗಂಭೀರ ಗಾಯವಾಗಿದೆ. ಗಾಯಾಳು ಚಾಲಕನನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ನಲ್ಲಿದ್ದ ನೌಕರರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು