Advertisement
ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಬಳ್ಳಾರಿ, ಶಿವಮೊಗ್ಗ ಲೋಕಸಭೆ ಕ್ಷೇತ್ರ ಹಾಗೂ ಜಮಖಂಡಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ. ಮಂಡ್ಯ ಲೋಕಸಭೆ ಹಾಗೂ ರಾಮನಗರ ವಿಧಾನಸಭೆ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದ್ದು, ಎರಡೂ ಪಕ್ಷಗಳು ಜಂಟಿಯಾಗಿ ಪ್ರಚಾರ ನಡೆಸಲಿವೆ ಎಂದು ಹೇಳಿದರು.
ಇದಕ್ಕೂ ಮುನ್ನ ಕಾಂಗ್ರೆಸ್ ಜತೆ ಮೈತ್ರಿ ಹಾಗೂ ಜೆಡಿಎಸ್ ಆಭ್ಯರ್ಥಿಗಳ ಆಯ್ಕೆ ಸಂಬಂಧ ಎಚ್. ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು. ರಾಮನಗರ ವಿಧಾನಸಭೆ ಹಾಗೂ ಮಂಡ್ಯ ಲೋಕಸಭೆ ಕ್ಷೇತ್ರ ಜೆಡಿಎಸ್‌ಗೆ
ಬರುವುದರಿಂದ ಸೂಕ್ತ ಅಭ್ಯರ್ಥಿಗಳ ಆಯ್ಕೆ ಮಾಡಿ ಗೆಲ್ಲಲು ಕಾರ್ಯತಂತ್ರ ರೂಪಿಸುವುದು ಸಹಿತ ಹಲವು ವಿಚಾರಗಳ ಬಗ್ಗೆ ಚರ್ಚಿಸಿದರು ಎಂದು ಹೇಳಲಾಗಿದೆ.
Related Articles
Advertisement
ಕಮಲದಲ್ಲಿ ಅಭ್ಯರ್ಥಿ ಫೈನಲ್ಬಿಜೆಪಿಯಲ್ಲಿ ಲೋಕಸಭಾ ಕ್ಷೇತ್ರಗಳಾದ ಶಿವಮೊಗ್ಗ ಮತ್ತು ಬಳ್ಳಾರಿಗೆ ಬಿ.ವೈ.ರಾಘವೇಂದ್ರ, ಜೆ.ಶಾಂತಾ ಅವರನ್ನು ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರಕ್ಕೆ ಶ್ರೀಕಾಂತ ಕುಲಕರ್ಣಿ ಹೆಸರು ಶಿಫಾರಸು ಮಾಡಲಾಗಿದೆ. ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಕೇಂದ್ರ ಚುನಾವಣಾ ಸಮಿತಿಗೆ ಈ ಶಿಫಾರಸು ಮಾಡಿದ್ದು, ರಾಮನಗರ ಹಾಗೂ ಮಂಡ್ಯ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಅಧಿಕಾರ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ನೀಡಲಾಗಿದೆ. ಈ ಎರಡೂ ಕ್ಷೇತ್ರಗಳಲ್ಲಿ ಅನ್ಯ ಪಕ್ಷಗಳ ಪ್ರಭಾವಿ ಮುಖಂಡರಿಗೆ ಬಿಜೆಪಿಗಾಳ ಹಾಕಿದೆ ಎಂದು ಹೇಳಲಾಗುತ್ತಿದೆ. ನಾಯಕರ ಮ್ಯಾರಥಾನ್ ಸಭೆ
ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಿದ್ದು ಅಭ್ಯರ್ಥಿಗಳ ಆಯ್ಕೆ ಸಂಬಂಧ ಮೂರೂ ಪಕ್ಷಗಳ ನಾಯಕರು ಮ್ಯಾರಥಾನ್ ಸಭೆ ನಡೆಸಿ ದರು. ಒಂದೆಡೆ ಅಭ್ಯರ್ಥಿಗಳ ಆಯ್ಕೆಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆದರೆ, ಮತ್ತೂಂದೆಡೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಡಿಸಿಎಂ ಡಾ| ಜಿ.ಪರಮೇಶ್ವರ್, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಚಿವ ಡಿ.ಕೆ.ಶಿವಕುಮಾರ್ ಪಾಲ್ಗೊಂಡಿದ್ದರು.
ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಮುಂದುವರಿದಿದ್ದು, ಜಮಖಂಡಿ ಕ್ಷೇತ್ರಕ್ಕೆ ಆನಂದ್ ನ್ಯಾಮಗೌಡ ಹೆಸರು ಅಂತಿಮಗೊಳಿಸಲಾಗಿದೆ. ಶಿವಮೊಗ್ಗ ಕ್ಷೇತ್ರಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಜಿಲ್ಲಾ ಮುಖಂಡ ಸುಂದರೇಶ್ ಅಥವಾ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೆಸರು ಪ್ರಸ್ತಾವವಾಗಿದೆ. ಬಳ್ಳಾರಿ ಲೋಕಸಭೆ ಕ್ಷೇತ್ರಕ್ಕೆ ಹತ್ತು ಆಕಾಂಕ್ಷಿಗಳಿದ್ದು ಒಮ್ಮತದ ಅಭ್ಯರ್ಥಿ ಆಯ್ಕೆ ಹೊಣೆಗಾರಿಕೆ ಡಿ.ಕೆ.ಶಿವಕುಮಾರ್ ಅವರಿಗೆ ವಹಿಸಲಾಗಿದೆ. ಬಳ್ಳಾರಿ, ಶಿವಮೊಗ್ಗ ಲೋಕಸಭೆ ಕ್ಷೇತ್ರ ಹಾಗೂ ಜಮಖಂಡಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ. ಮಂಡ್ಯ ಲೋಕಸಭೆ ಹಾಗೂ ರಾಮನಗರ ವಿಧಾನಸಭೆ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದ್ದು ಎರಡೂ ಪಕ್ಷಗಳು ಜಂಟಿಯಾಗಿ ಪ್ರಚಾರ ಮಾಡಲಿವೆ. ರಾಷ್ಟ್ರಮಟ್ಟದಲ್ಲಿ ಸಂದೇಶ ಸಾರಲು ಮೈತ್ರಿ ಮಾಡಿಕೊಳ್ಳಲಾಗಿದೆ.
ವೇಣುಗೋಪಾಲ್, ಕಾಂಗ್ರೆಸ್ ಉಸ್ತುವಾರಿ ರಾಜ್ಯದಲ್ಲಿ ಘೋಷಣೆ ಯಾಗಿರುವ ಐದು ಕ್ಷೇತ್ರಗಳ ಉಪ ಚುನಾವಣೆ ಯನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ಒಟ್ಟಾಗಿ ಎದುರಿಸಲು ತೀರ್ಮಾನಿಸಿವೆೆ.
ಬಿಜೆಪಿ ಸೋಲಿಸುವುದು ನಮ್ಮ ಗುರಿ.
ಸಿದ್ದರಾಮಯ್ಯ, ಸಮನ್ವಯ ಸಮಿತಿ ಅಧ್ಯಕ್ಷ ಅಭ್ಯರ್ಥಿಗಳ ಆಯ್ಕೆ ಸಂಬಂಧ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ಹಾಗೂ ಎಚ್.ಡಿ.ಕುಮಾರ ಸ್ವಾಮಿಯವರ ಜತೆ ಚರ್ಚಿಸಲಾಗಿದೆ. ಜಿಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು.
ಎಚ್.ವಿಶ್ವನಾಥ್, ಜೆಡಿಎಸ್ ರಾಜ್ಯಾಧ್ಯಕ್ಷ