Advertisement
ಅವರು ಮಂಗಳವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ ಕುರಿತ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
Related Articles
ಸೋಂಕಿತರು ಕಂಡು ಬರುವ ಗ್ರಾಮಗಳ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು, ಸೋಂಕಿತರ ಮನೆಗೆ ಖುದ್ದು ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಬೇಕು. ಅಗತ್ಯಕ್ಕೆ ಅನುಗುಣವಾಗಿ ಆಸ್ಪತ್ರೆಗೆ ಅಥವಾ ಕೋವಿಡ್ ಕೇರ್ ಸೆಂಟರ್‌ಗೆ ಸ್ಥಳಾಂತರಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದರು.
Advertisement
ಸೋಂಕಿತರನ್ನು ಕೋವಿಡ್ ಕೇರ್‌ಸೆಂಟರ್‌ಗೆ ಶೀಘ್ರದಲ್ಲಿ ಸ್ಥಳಾಂತರಿಸಲು ಅನುಕೂಲವಾಗುವಂತೆ ಪ್ರತೀ 2 ಗಂಟೆಗೊಮ್ಮೆ ಸೋಂಕಿತರ ಮಾಹಿತಿಯನ್ನು, ಸಂಬಂಧಪಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಗೆ ನೀಡಬೇಕು.
ಕೇರ್‌ಸೆಂಟರ್‌ನಲ್ಲಿ ಈ ಹಿಂದಿನಂತೆಯೇ ಉತ್ತಮ ರೀತಿಯ ಊಟ ಮತ್ತು ಉಪಹಾರ ವ್ಯವಸ್ಥೆಯನ್ನು ಮಾಡುವಂತೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ :ರಾಜ್ಯದ 83 ತಾಲ್ಲೂಕುಗಳು ಪ್ರವಾಹ ಪೀಡಿತ: ಕಂದಾಯ ಸಚಿವ ಆರ್ ಅಶೋಕ
ಕೋವಿಡ್ ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚುವ ಸಂದರ್ಭದಲ್ಲಿ ಪ್ರತೀ ಪಾಸಿಟಿವ್ ಪ್ರಕರಣಕ್ಕೆ 20ಕ್ಕಿಂತ ಹೆಚ್ಚು ಸಂಪರ್ಕಿತರನ್ನು ಪತ್ತೆ ಹಚ್ಚಿ ಪರೀಕ್ಷೆಗೆ ಒಳಪಡಿಸಬೇಕು. ಅದರಲ್ಲಿ ಕಡ್ಡಾಯವಾಗಿ 10ಕ್ಕಿಂತ ಹೆಚ್ಚು ಪ್ರಾಥಮಿಕ ಸಂಪರ್ಕಿತರು ಇರುವಂತೆ ನೋಡಿಕೊಳ್ಳಬೇಕು. ರೈಲುಗಳ ಮೂಲಕ ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವ ಪ್ರಯಾಣಿಕರ ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ವರದಿ ಪಡೆಯಲು ನೇಮಿಸಿರುವ ಅಧಿಕಾರಿಗಳು, ನೆಗೆಟಿವ್ ವರದಿ ಇಲ್ಲದೇ ಬರುವವರನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಕೋವಿಡ್-19 ಪ್ರಮಾಣವನ್ನು ಶೇ.1ಕ್ಕಿಂತ ಕಡಿಮೆಗೊಳಿಸಲು ಟೆಸ್ಟಿಂಗ್, ಟ್ರೇಸಿಂಗ್ ಸೇರಿದಂತೆ ಎಲ್ಲ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಅಗತ್ಯವಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬಂದಿಗಳು ಕಾರ್ಯನಿರ್ವಹಿಸುವಂತೆ ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ| ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ, ಡಿಎಚ್‌ಓ ಡಾ| ನಾಗಭೂಷಣ ಉಡುಪ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.