Advertisement

ಕನಿಷ್ಠ ಆದಾಯ ಯೋಜನೆ ಬಡತನ ವಿರುದ್ಧ ಬ್ರಹ್ಮಾಸ್ತ್ರ

11:43 AM Mar 27, 2019 | Team Udayavani |

ಬೆಂಗಳೂರು: “ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಘೋಷಣೆ ಮಾಡಿರುವ ಕನಿಷ್ಠ ಆದಾಯ ಯೋಜನೆ ಬಡತನದ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸಿದಂತಾಗಿದ್ದು, ಬಡವ ಮತ್ತು ಶ್ರೀಮಂತರ ನಡುವಿನ ಅಂತರ ಕಡಿಮೆ ಮಾಡಲು ಈ ಯೋಜನೆ ಅನುಕೂಲಕರವಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ಬಡ ಕುಟುಂಬಕ್ಕೆ ಮಾಸಿಕ 6 ಸಾವಿರ ರೂ. ಖಾತೆಗೆ ನೇರ ಹಣ ವರ್ಗಾವಣೆ ಮಾಡುವುದರಿಂದ ಸುಮಾರು 5 ಕೋಟಿ ಕುಟುಂಬಗಳ 25 ಕೋಟಿ ಜನರನ್ನು ಬಡತನದಿಂದ ಮೇಲೆತ್ತಲು ಅನುಕೂಲವಾಗುತ್ತದೆ. ಇದೊಂದು ಕ್ರಾಂತಿಕಾರಕ, ಐತಿಹಾಸಿಕ ಕಾರ್ಯಕ್ರಮ’ ಎಂದರು.

ಕಾಂಗ್ರೆಸ್‌ ಯಾವಾಗಲೂ ಸಾಮಾನ್ಯ ಜನರ ಪರವಾದ ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತದೆ. ಬಿಜೆಪಿಯ ಕೇಂದ್ರ ಸರ್ಕಾರ ನರೇಗಾ ಯೋಜನೆ, ಅರಣ್ಯ ಹಕ್ಕು ಕಾಯ್ದೆ, ಆಹಾರ ಭದ್ರತೆ, ಭೂಸ್ವಾಧೀನ ಯೋಜನೆಯನ್ನು ದಾರಿ ತಪ್ಪಿಸುವ ಕೆಲಸ ಮಾಡಿದೆ. ಕೇಂದ್ರ ಸರ್ಕಾರ ಶ್ರೀಮಂತರ ಪರವಾದ ಯೋಜನೆಗಳನ್ನು ಜಾರಿಗೊಳಿಸಿ ಸಾಮಾನ್ಯರ ವಿರೋಧಿಯಾಗಿದೆ ಎಂದರು.

ಯುಪಿಎ ಸರ್ಕಾರ ರೈತರಿಗೆ ಅವರ ಬೆಳೆಯ ಶೇ.50 ರಷ್ಟು ಕನಿಷ್ಠ ಬೆಂಬಲ ಬೆಲೆ ನೀಡುವುದನ್ನು ವಿರೋಧಿಸಿದರು. ಪ್ರಧಾನಿ ಮೋದಿ ರೈತರ ಕೃಷಿ ಸಾಲ ಮನ್ನಾ ಯೋಜನೆ ವಿರೋಧಿಸಿದರು. ಫ‌ಸಲ್‌ ಭಿಮಾ ಯೋಜನೆಯಿಂದ ವಿಮಾ ಕಂಪನಿಗಳಿಗೆ ಲಾಭ ಮಾಡಿಕೊಡುವ ಕೆಲಸ ಮಾಡುತ್ತಿದ್ದಾರೆ. ಆಯುಷ್ಮಾನ್‌ ಭಾರತ್‌ ಯೋಜನೆ ಖಾಸಗಿ ಆಸ್ಪತ್ರೆಗಳಿಗೆ ಅನುಕೂಲ ಮಾಡಿಕೊಡುವ ಕಾರ್ಯಕ್ರಮಗಳಾಗಿವೆ ಎಂದು ವಾಗ್ಧಾಳಿ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next