Advertisement

ಕನಿಷ್ಠ ಕಾನೂನು ಅರಿವು ಎಲ್ಲರಿಗೂ ಅಗತ್ಯ: ಲಾವಣ್ಯ

12:40 AM Mar 09, 2019 | |

ಉಡುಪಿ:  ಕನಿಷ್ಠ ಕಾನೂನಿನ ಅರಿವು ಎಲ್ಲರಿಗೂ ಇರಬೇಕು. ಇಲ್ಲವಾದಲ್ಲಿ ಸಣ್ಣ ವಿಚಾರಗಳಿಗೂ ಕಾನೂನು ತಜ್ಞರನ್ನು ಸಂಪರ್ಕಿಸ ಬೇಕಾಗುತ್ತದೆ. ಒಂದು ಲಕ್ಷಕ್ಕಿಂತ ಕಡಿಮೆ ಆದಾಯ ಇರುವವರಿಗೆ ಉಚಿತ ಕಾನೂನು ವ್ಯವಸ್ಥೆ ಇದೆ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾಧೀಶ ಲಾವಣ್ಯ ಎಚ್‌. ಎನ್‌. ಹೇಳಿದರು. 

Advertisement

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಅಭಿಯೋಗ ಇಲಾಖೆ, ಪೊಲೀಸ್‌ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ   ವಳಕಾಡಿನ ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ  ನಡೆದ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು  ಮಾತನಾಡಿ  ವಿದ್ಯಾರ್ಥಿಗಳಿಗೆ ಕಾನೂನು ಮಾಹಿತಿ ನೀಡಿದರು. 

ಶಾಲಾ ಮುಖ್ಯ ಶಿಕ್ಷಕಿ ನಿರ್ಮಲಾ ಬಿ. ಅಧ್ಯಕ್ಷತೆ ವಹಿಸಿದ್ದರು.  ಮಾದಕ ವ್ಯಸನ ಮತ್ತು ಅದರ ತಡೆಗಟ್ಟವಿಕೆ ಬಗ್ಗೆ  ನ್ಯಾಯವಾದಿ ಅಖೀಲ್‌ ಬಿ. ಹೆಗ್ಡೆ   ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ  ಅರ್ಚನಾ ಕೆ. ಉನ್ನಿಥಾನ್‌  ಉಪಸ್ಥಿತರಿದ್ದರು.  

Advertisement

Udayavani is now on Telegram. Click here to join our channel and stay updated with the latest news.

Next