Advertisement

ಮೈನಿಂಗ್‌ ಹಗರಣ ಆರೋಪ: ಸಿಎಂ ವಿರುದ್ಧ  ಹೈಕೋರ್ಟ್‌ಗೆ ಅರ್ಜಿ

01:16 AM Feb 15, 2019 | |

 ಬೆಂಗಳೂರು: ಜಂತಕಲ್‌ ಮೈನಿಂಗ್‌ ಹಗರಣ ಆರೋಪ ಪ್ರಕರಣ ಇದೀಗ ಮತ್ತೆ ಹೈಕೋರ್ಟ್‌ ಅಂಗಳಕ್ಕೆ ಬಂದಿದ್ದು, ಜಂತಕಲ್‌ ಎಂಟರ್‌ಪ್ರೈಸೆಸ್‌ಗೆ ಗಣಿ ಪರವಾನಿಗೆ ನವೀಕರಣದಲ್ಲಿ ಅವ್ಯವಹಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದಟಛಿದ ಚಾರ್ಜ್‌ ಶೀಟ್‌ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಹಾಗೂ ಅವರ ವಿರುದಟಛಿ ಕಾನೂನು ಕ್ರಮ ಜರುಗಿಸಲು ಲೋಕಾಯುಕ್ತಕ್ಕೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

Advertisement

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಕಬ್ಟಾಳ ಗ್ರಾಮದ ಸಾಮಾಜಿಕ ಹಾಗೂ ಮಾಹಿತಿ ಹಕ್ಕು ಕಾರ್ಯಕರ್ತ ಹರೀಶ ಹಳ್ಳಿ, ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಇದರಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಕಾನೂನು ಇಲಾಖೆ ಕಾರ್ಯದರ್ಶಿ ಹಾಗೂ ಲೋಕಾಯುಕ್ತ ರಿಜಿಸ್ಟ್ರಾರ್‌ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಸಿಎಂ ಎಚ್‌.ಡಿ. ಕುಮಾರಸ್ವಾಮಿ 2018ರ ವಿಧಾನಸಭೆ ಚುನಾವಣೆಗೆ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಲು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ನಾಮಪತ್ರದ ಜತೆಗೆ ಜಂತಕಲ್‌ ಮೈನಿಂಗ್‌ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದಟಛಿ ಹೆಚ್ಚುವರಿ ಸಿಟಿ ಸಿವಿಲ್‌ ಹಾಗೂ ಸೆಷನ್ಸ್‌ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಬಾಕಿ ಇದೆ ಎಂದು ಘೋಷಿಸಿಕೊಂಡಿದ್ದಾರೆ.

ಈ ಬಗ್ಗೆ ಲೋಕಾಯುಕ್ತ ರಿಜಿಸ್ಟ್ರಾರ್‌ಗೆ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿ ಮಾಹಿತಿ ಕೇಳಿದರೆ ಈವರೆಗೆ ಯಾವುದೇ ಉತ್ತರ ಬಂದಿಲ್ಲ. ಈ ನಡುವೆ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಹಿಂದೆಯೇ ಚಾರ್ಜ್‌ಶೀಟ್‌ ಸಿದಟಛಿಪಡಿಸಲಾಗಿದೆ. ಆದರೆ, ಇಲ್ಲಿತನಕ ಜಾರ್ಜ್‌ಶೀಟ್‌ ಸಲ್ಲಿಕೆಯಾಗಿಲ್ಲ. ಎಂದು ಅರ್ಜಿಯಲ್ಲಿ ದೂರಲಾಗಿದೆ.

ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧದ ದೂರುಗಳ ಕುರಿತು ಜಾರ್ಜ್‌ಶೀಟ್‌ ಸಲ್ಲಿಸುವಂತೆ ಹಾಗೂ ಕುಮಾರಸ್ವಾಮಿ ವಿರುದಟಛಿ ಕಾನೂನು ರೀತಿ ಕ್ರಮ ಜರುಗಿಸುವಂತೆ ಲೋಕಾಯುಕ್ತ ಸಂಸ್ಥೆಗೆ ನಿರ್ದೇಶನ ನೀಡುವಂತೆ ಅರ್ಜಿದಾರರು ಕೋರಿದ್ದಾರೆ. ಜತೆಗೆ ಈ ಕುರಿತು 2019ರ ಫೆ.7ರಂದು ರಾಷ್ಟ್ರಪತಿ, ಅಟಾರ್ಜಿ ಜನರಲ್‌ ಹಾಗೂ ರಾಜ್ಯಪಾಲರಿಗೆ ಮನವಿಯನ್ನೂ ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next