Advertisement
ತಾಲೂಕಿನ ಕಾಳೇನಹಳ್ಳಿ ಗ್ರಾಮದ ಬಳಿ ಹೆದ್ದಾರಿ ರಸ್ತೆ ಗುತ್ತಿಗೆ ಪಡೆದಿರುವ ಡಿಬಿಎಲ್ ಕಂಪನಿಯವರುಅಕ್ರಮವಾಗಿ ಕಾಡನ್ನು ಬಳಸಿಕೊಂಡು ಸುಮಾರು 10 ಎಕರೆಯಷ್ಟು ಭೂಮಿಯಲ್ಲಿ ಗಣಿಗಾರಿಕೆ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿತ್ತು. ಈ ಗಣಿಗಾರಿಕೆ ಬಗ್ಗೆಸಂಸದೆ ಸುಮಲತಾ ಅವರು ಸಂಸತ್ತಿನಲ್ಲಿ ಗಣಿಗಾರಿಕೆ ಕುರಿತು ಚರ್ಚೆ ಮಾಡಿದ್ದರು.
Related Articles
Advertisement
ಅಕ್ರಮ ಸಕ್ರಮ: ರಾಜ್ಯದಲ್ಲೇ ಕೆಲವು ಕಡೆ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದರಿಂದ ಮಾಹಿತಿ ಕಲೆ ಹಾಕಲಾಗಿದೆ. ಮಂಡ್ಯ ಜಿಲ್ಲೆಯಲ್ಲಿಯೂ ಅಕ್ರಮ ಗಣಿಗಾರಿಕೆ ಇರುವುದುಕಂಡು ಬಂದಿದೆ. ಅಕ್ರಮ ಗಣಿಗಾರಿಕೆಯಿಂದಸರ್ಕಾರಕ್ಕೆ ನಷ್ಟವಾಗುತ್ತಿದೆ. ಅಕ್ರಮವನ್ನು ಸಕ್ರಮ ಮಾಡಿ, ಸರ್ಕಾರದ ಬೊಕ್ಕಸಕ್ಕೆ ಆದಾಯ ಬರುವಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.
ರಾಜಧನ ಪಾವತಿಸದವರ ವಿರುದ್ಧ ಕ್ರಮ: ಅಕ್ರಮ ಗಣಿಗಾರಿಕೆ ಮಾಡಿದವರಿಗೆ ದಂಡ ವಿಧಿಸಿ, ಅಲ್ಲದೇ ರಾಜಧನ ಪಾವತಿ ಮಾಡದವರ ವಿರುದ್ಧ ಕ್ರಮಕೈಗೊಂಡು ಅವರಿಂದ ರಾಜಧನ ವಸೂಲಿ ಮಾಡಲಾಗುವುದು. ಜಿಲ್ಲೆಯಲ್ಲಿ ನಡೆಯು ತ್ತಿರುವ ಅಕ್ರಮ ಗಣಿಗಾರಿಕೆಯ ನಿಷೇಧಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದ್ದು, ಈ ಸಂಬಂಧ ಅಧಿಕಾರಿಗಳು ನೀಡುವ ವರದಿ ಆಧರಿಸಿ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದರು.
ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಲೀಕರಿಗೆ ರಾಜಧನ ಕಟ್ಟಿ ಇಲ್ಲವೇ ಗಣಿಗಾರಿಕೆ ಸ್ಥಗಿತಗೊಳಿಸಿ, ಈ ಸಂಬಂಧ ಅಧಿಕಾರಿಗಳು ಕ್ರಮ ವಹಿಸಬೇಕು. ಸರ್ಕಾರಈಗಾಗಲೇ ಅಕ್ರಮ ಮರಳು ಸಾಗಾಣಿಕೆ ಮಾಡಿದವರಿಗೆ ದಂಡ ವಿಧಿಸಿದ್ದು, ಕೇವಲ ಆಶ್ರಯಮನೆ ಕಟ್ಟುವವರಿಗೆ ಮಾತ್ರ ಮರಳು ಪಡೆಯಲು ಅವಕಾಶ ಮಾಡಿಕೊಟ್ಟಿದೆ. ಆದರೆ, ಅಕ್ರಮವಾಗಿ ಎತ್ತಿನಗಾಡಿಯಲ್ಲಿ ಸಾಗಿಸಿ ಬೇರೆಯವರಿಗೆ ಮಾರಾಟ ಮಾಡುವವರಿಗೂ ದಂಡ ವಿಧಿಸಿದ್ದೇವೆ ಎಂದರು.
ತಹಶೀಲ್ದಾರ್ ರೂಪ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಪುಷ್ಪಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ: ಸುಮಲತಾ :
ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತುವುದೇ ನನ್ನ ನಿಲುವಾಗಿದೆ ಎಂದು ಸಂಸದೆ ಸುಮಲತಾ ಹೇಳಿದರು. ಸಂಸದೆಯಾಗಿ ಸಂಸತ್ ಪ್ರವೇಶ ಮಾಡಿದ ದಿನದಿಂದ ಇದು ನನ್ನ ನಿಲುವಾಗಿತ್ತು. ಕೆಆರ್‌ಎಸ್ ಡ್ಯಾಂ ಸುರಕ್ಷತೆಗಾಗಿ ಧ್ವನಿ ಎತ್ತಿದ್ದೇನೆ. ಜಲಾಶಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಬ್ಲಾಸ್ಟ್ ಮಾಡಿದರೆ ಅಣೆಕಟ್ಟೆಗೆ ತೊಂದರೆಯಾಗುತ್ತದೆ. ಆದ್ದರಿಂದ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸಬೇಕು. ಕೊರೊನಾದಿಂದ ನಮ್ಮ ಜಿಲ್ಲೆಗೆ ನಷ್ಟವಾಗಿರುವುದರಿಂದ ಬೇರೆ ಬೇರೆ ಅನುದಾನ ಬರುತ್ತಿಲ್ಲ. ಜಿಲ್ಲಾ ಮೈನಿಂಗ್ ಫಂಡ್ ಇದೆ. ರಾಜಧನವನ್ನು ಅಭಿವೃದ್ಧಿಗೆ ಉಪಯೋಗಿಸಬಹುದು. ರಾಜಧನ ಕಟ್ಟದೆ ತಪ್ಪಿಸಿಕೊಳ್ಳವ ಕೆಲಸ ಮಾಡಬಾರದು ಎಂದರು.
ನಮ್ಮ ಜಿಲ್ಲೆಗೆ ಅನ್ಯಾಯ ಸಹಿಸಲ್ಲ: ರಾಯಲ್ಟಿ ಕಟ್ಟುವ ವಿಚಾರದಲ್ಲಿ ಗೊಂದಲ ನಡೆಯುತ್ತಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಇದನ್ನ ತಡೆಯುವ ಉದ್ದೇಶ ನನ್ನದಲ್ಲ. ಆದರೆ, ನಮ್ಮ ಜಿಲ್ಲೆಗೆ ಅನ್ಯಾಯ ಆಗುತ್ತಿರುವುದನ್ನು ನೋಡುತ್ತ ಕೂರಲ್ಲ. ರೈತರು ಭೂಮಿ ಬಿಟ್ಟುಕೊಟ್ಟು ಹೆದ್ದಾರಿ ಕಾಮಗಾರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಅಂಥ ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯ ಆಗಬಾರದು. ಅಕ್ರಮ ಗಣಿಗಾರಿಕೆ ಬಗ್ಗೆ ಸಚಿವರಿಗೆ ತಿಳಿಸಿದ್ದೆ. ಆದ್ದರಿಂದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಜಧನ ಕಟ್ಟದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈ ಹೋರಾಟದಲ್ಲಿ ಯಾರು ಏನೇ ಹೇಳಲಿ, ಯಾರೇ ಏನೇ ನನ್ನ ವಿರುದ್ಧ ಮಾತನಾಡಲಿ ನನ್ನ ಹೋರಾಟ ನಿಲ್ಲಲ್ಲ ಎಂದು ಹೇಳಿದರು.