Advertisement
ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಗಳ ವ್ಯಾಪ್ತಿಯಲ್ಲಿ ದಿವಂಗತ ಮಾಜಿ ಪ್ರಧಾನಿ ವಾಜಪೇಯಿಯವರ ಜನ್ಮದಿನದ ಅಂಗವಾಗಿ ಈ ಸುಶಾಸನ ಉಪಕ್ರಮವನ್ನು ವ್ಯಾಪಕ ಸ್ವರೂಪದಲ್ಲಿ ಹಮ್ಮಿಕೊಳ್ಳಲಾಗಿದೆ. ಇದರ ಆರಂಭಕ್ಕಾಗಿ ವಿಧಾನಸೌಧದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
Related Articles
Advertisement
ಕೌಶಲ್ಯ ಕಲಿಕೆಗೆ ಮತ್ತಷ್ಟು ಬಲಆಧುನಿಕ ಜಗತ್ತಿನಲ್ಲಿ ಯುವಜನರಲ್ಲಿ ಕೌಶಲ್ಯ ಕಲಿಕೆ ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯ ಸ್ಕಿಲ್ ಕನೆಕ್ಟ್ ಪೋರ್ಟಲ್‌ಗೆ ಹೊಸ ರೂಪ ಕೊಡಲಾಗಿದೆ. ಇದರಿಂದ ಉದ್ಯೋಗಾಕಾಂಕ್ಷಿ ಮತ್ತು ಉದ್ಯೋಗದಾತರ ನಡುವೆ ಸಕ್ರಿಯ ಸಂಬಂಧ ಉಂಟಾಗಲಿದೆ. ಇನ್ನೊಂದೆಡೆಯಲ್ಲಿ, ಐಟಿಐ ಅಂಕಪಟ್ಟಿಗಳ ಡಿಜಿಟಲೀಕರಣ ಮತ್ತು ಅವುಗಳನ್ನು ರಾಷ್ಟ್ರೀಯ ಶೈಕ್ಷಣಿಕ ಕೋಠಿಗೆ ಅಪ್‌ಲೋಡ್ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ. ಒಟ್ಟು 60 ಸಾವಿರ ಐಟಿಐ ವಿದ್ಯಾರ್ಥಿಗಳಿಗೆ ಮೈಕ್ರೋಸಾಫ್ಟ್ ಕಂಪನಿಯ ವತಿಯಿಂದ ಉತ್ಕೃಷ್ಟ ತರಬೇತಿ ಕೊಡಿಸಲಾಗುವುದು ಎಂದು ಅಶ್ವತ್ಥನಾರಾಯಣ ವಿವರಿಸಿದರು. ಇದರಡಿಯಲ್ಲಿ ಇಂಗ್ಲಿಷ್ ಕಲಿಕೆ ಲ್ಯಾಬ್‌ಗಳ ಸ್ಥಾಪನೆ, ಜಪಾನಿನಲ್ಲಿ ಉದ್ಯೋಗಾವಕಾಶ ದೊರಕಿಸಿ ಕೊಡಲು ಜಪಾನಿ ಭಾಷೆಯ ಕಲಿಕೆಗೆ ವ್ಯವಸ್ಥೆ, ಲೋಕೋಸ್ ತಂತ್ರಾಂಶದ ಮೂಲಕ ಸ್ವಸಹಾಯ ಸಂಘಗಳ ಮಾಹಿತಿ ಮತ್ತು ಹಣಕಾಸು ವ್ಯವಹಾರಗಳಲ್ಲಿ ಪಾರದರ್ಶಕತೆ ತರಲಾಗುವುದು. ಜತೆಗೆ ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ಮತ್ತು ಮಾರಾಟ ಪ್ರಮಾಣ ಪತ್ರಗಳನ್ನು ವಿತರಿಸಲಾಗುವುದು. ಮಿಗಿಲಾಗಿ 13,500 ಮಹಿಳಾ ಉದ್ಯಮಿಗಳಿಗೆ ಸಿ-ಡಾಕ್ ಮೂಲಕ ಪ್ರೇರಣಾ ಶಿಬಿರಗಳನ್ನು ಆಯೋಜಿಸಲಾಗುವುದು. ಒಟ್ಟಿನಲ್ಲಿ 10 ಸಾವಿರ ಜನರಿಗೆ ಏಕಕಾಲದಲ್ಲಿ ನೇಮಕಾತಿ ಪತ್ರಗಳನ್ನು ನೀಡಲಾಗುವುದು. ಎಂದು ಅವರು ನುಡಿದರು. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಬಾಗಲಕೋಟೆ, ಕೊಪ್ಪಳ, ದಾವಣಗೆರೆಗಳಲ್ಲಿ ನಿರ್ಮಿಸುತ್ತಿರುವ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಗದಗಿನ ಮಿನಿ ತಾರಾಲಯವನ್ನು ಸದ್ಯದಲ್ಲೇ ಸಾರ್ವಜನಿಕರಿಗೆ ಮುಕ್ತಗೊಳಿಸಲಾಗುವುದು. ಕಿಯೋನಿಕ್ಸ್ ಸಂಸ್ಥೆಯಲ್ಲಿ 1976ರಿಂದಲೂ ಇರುವ ದಾಖಲೆಗಳನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು. ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕೌಶಲ್ಯ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅವರು ಸ್ಕಿಲ್ ಕನೆಕ್ಟ್ ವೆಬ್ ಸೈಟ್ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರಭಾಕರ್ ಅವರು ಒಟ್ಟಾರೆ ಸುಶಾನ ಮಾಸದಲ್ಲಿ ಕೈಗೊಳ್ಳುವ ಕಾರ್ಯಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕೆಯನ್ನು ನೀಡಿದರು. ಐಟಿ ಬಿಟಿ ನಿರ್ದೇಶಕಿ ಮೀನಾ ನಾಗರಾಜ, ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತೆ ಜ್ಯೋತಿ, ಎನ್ ಆರ್ ಎಲ್ ಎಂ ವ್ಯವಸ್ಥಾಪಕ ನಿರ್ದೇಶಕಿ ರಾಗಪ್ರಿಯಾ, ವಿಜ್ಞಾನ ಮತ್ತು ತಂತ್ರಜ್ಞಾನ ಸೊಸೈಟಿ ವ್ಯವಸ್ಥಾಪ ನಿರ್ದೇಶಕ ಬಸವರಾಜ, ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಆರ್.ಅಶ್ವಿನ್ ಗೌಡ ಮುಂತಾದವರು ಉಪಸ್ಥಿತರಿದ್ದರು. 5 ಸಂಸ್ಥೆಗಳೊಂದಿಗೆ ಒಡಂಬಡಿಕೆಗೆ ಅಂಕಿತ
ಸುಶಾಸನ ಮಾಸಾಚರಣೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಟ್ಯಾಲೆನ್ಷೀಯಾ ಗ್ಲೋಬಲ್, ಇನ್ನೋವ್‌ಸೋರ್ಸ್, ಫ್ಯೂಯೆಲ್, ಎಐಎಸ್ಇಸಿಟಿ ಮತ್ತು ಇನ್ಫಿಕ್ವಿಟಿ ಆಟೋ ಟೆಕ್ನಾಲಜೀಸ್ ಕಂಪನಿಗಳ ಮುಖ್ಯಸ್ಥರೊಂದಿಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ ಅವರು ಹಲವು ಒಪ್ಪಂದಗಳಿಗೆ ಸಹಿ ಹಾಕಿದರು. ಇದರ ಬಗ್ಗೆ ವಿವರಿಸಿದ ಆಯುಕ್ತ ಪ್ರದೀಪ ಅವರು, ಟ್ಯಾಲೆನ್ಷಿಯಾ ಕಂಪನಿಯು ಕಳೆದ ಮೂರು ವರ್ಷಗಳಲ್ಲಿ ತಾಂತ್ರಿಕ ಕ್ಷೇತ್ರದಲ್ಲಿ 1,500 ಜನರಿಗೆ ಉದ್ಯೋಗ ನೀಡಿ, ಇಷ್ಟೇ ಸಂಖ್ಯೆಯ ಜನರಿಗೆ ಉದ್ಯೋಗ ತರಬೇತಿ ನೀಡಿದೆ. ಮಿಕ್ಕಂತೆ ಇನ್ನೋವ್‌ಸೋರ್‍ಸ್ ಕಂಪನಿಯು ರಾಜ್ಯದ 1.20 ಲಕ್ಷ ಅರ್ಹರಿಗೆ, ಫ್ಯೂಯೆಲ್ ಕಂಪನಿಯು 19 ಸಾವಿರ ತಂತ್ರಜ್ಞರಿಗೆ ಮತ್ತು ಮಿಕ್ಕ ಕ್ಷೇತ್ರಗಳ 6 ಸಾವಿರ ಜನರಿಗೆ (ಒಟ್ಟು 25 ಸಾವಿರ ಮಂದಿಗೆ), ಎಐಎಸ್‌ಇಸಿಟಿ ಕಂಪನಿಯು ರಾಜ್ಯದ 6 ಸಾವಿರ ಅಭ್ಯರ್ಥಿಗಳಿಗೆ ಮತ್ತು ಇನ್ಫಿಕ್ವಿಟಿ ಕಂಪನಿಯು 250 ಜನರಿಗೆ ಉದ್ಯೋಗಾವಕಾಶ ಮತ್ತು ಒಂದು ಸಾವಿರ ಯುವಜನರಿಗೆ ಔದ್ಯೋಗಿಕ ತರಬೇತಿ ನೀಡಿದೆ ಎಂದು ಅಂಕಿಅಂಶಗಳನ್ನು ಒದಗಿಸಿದರು. ಕೆಇಎಗೆ ಸುಶಾಸನದ ಸ್ಪರ್ಶ
ಸುಶಾಸನ ಮಾಸಾಚರಣೆ ಅಂಗವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೊಸ ರೂಪ ಕೊಡಲಾಗಿದೆ. ಇಲ್ಲಿ ನೇಮಕಾತಿ ವಿಭಾಗ ಮತ್ತು ಸೀಟು ಹಂಚಿಕೆ ವಿಭಾಗಗಳನ್ನು ಸೃಷ್ಟಿಸಿ, 20 ಹೊಸ ಹುದ್ದೆಗಳನ್ನು ಮಂಜೂರು ಮಾಡಲಾಗಿದೆ. ಇದಕ್ಕೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅಶ್ವತ್ಥನಾರಾಯಣ ಹೇಳಿದರು. ಇದಲ್ಲದೆ, ನೀಟ್ ಪರೀಕ್ಷೆ ಬಂದ ನಂತರ ಉಂಟಾಗಿರುವ ಗೊಂದಲಗಳನ್ನು ನಿವಾರಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಇದರ ಭಾಗವಾಗಿ ವಿದ್ಯಾರ್ಥಿಗಳ ದಾಖಲಾತಿಗಳ ಪರಿಶೀಲನೆಯನ್ನು ಮತ್ತಷ್ಟು ಸರಳಗೊಳಿಸಲಾಗುವುದು. ಜತೆಗೆ ವೃತ್ತಿಪರ ಕೋರ್ಸುಗಳ ಸೀಟು ಹಂಚಿಕೆಯನ್ನು ಇನ್ನಷ್ಟು ವಿದ್ಯಾರ್ಥಿಸ್ನೇಹಿಯನ್ನಾಗಿ ಮಾಡಲಾಗುವುದು ಎಂದು ಅವರು ಪ್ರತಿಪಾದಿಸಿದರು.