Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಲೋಕೋಪಯೋಗಿ ಇಲಾಖೆಗೆ ಸೇರಿದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಿದ್ದು, ನೀತಿ ಸಂಹಿತೆ ಜಾರಿಯಾದ ಮಾ.27ರ ಸಂಜೆ 7.30ರ ವೇಳೆಗೆ ಲೋಕೋಪ ಯೋಗಿ ಇಲಾಖೆ ಅಧಿಕಾರಿಗಳು ಪ್ರವಾಸಿ ಮಂದಿರ ಹಾಗೂ ಪ್ರವಾಸಿ ಮಂದಿರದ ಕಟ್ಟಡದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದರು. ಅಂದೇ ಸಚಿವ ಎ.ಮಂಜು ಹಾಗೂ ಅವರ ಭಾವಚಿತ್ರ ಹಾಗೂ ಕಡತಗಳನ್ನೂ ಕಚೇರಿಯಿಂದ ಹೊರಕ್ಕೆ ಕೊಂಡೊಯ್ಯ ಲಾಗಿತ್ತು. ಚುನಾವಣೆ ಘೋಷಣೆಯಾದ ನಂತರ ಹೊಸ ಸರ್ಕಾರ ಅಧಿಕಾರಕ್ಕೆ ಬರುವವರೆಗೂ ಪ್ರಮುಖ ಆಡಳಿತಾತ್ಮಕ ನಿರ್ಧಾರಗಳನ್ನು ಹೊರತುಪಡಿಸಿ ದೈನಂದಿನ ಕೆಲಸ ಮಾಡಲು ಅವಕಾಶ ವಿದೆ. ಹಾಗಾಗಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಇಬ್ಬರು ಮಹಿಳಾ ಸಿಬ್ಬಂದಿ ಕೆಲಸ ಮಾಡುತ್ತಿದ್ದರು ಅಷ್ಟೇ ಎಂದು ಸ್ಪಷ್ಟಪಡಿಸಿದರು. Advertisement
ಸಚಿವ ಎ. ಮಂಜು ವಿರುದ್ಧ ದುರುದ್ದೇಶದಿಂದ ಎಫ್ಐಆರ್
06:00 AM Apr 07, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.