Advertisement
ರಾತ್ರಿ 7ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಸಚಿವ ಅನುರಾಗ್ ಠಾಕೂರ್ ಉದ್ಘಾಟಿಸಲಿದ್ದಾರೆ. ರಾಜ್ಯ ಕ್ರೀಡಾ ಸಚಿವ ಡಾ| ಕೆ.ಸಿ. ನಾರಾಯಣ ಗೌಡ ಪಂದ್ಯಾಟಕ್ಕೆ ಚಾಲನೆ ನೀಡುವರು. ಕರ್ನಾಟಕ ಸಹಿತ ಮಹಾರಾಷ್ಟ್ರ, ಕೇರಳ, ದಿಲ್ಲಿ, ಹರಿಯಾಣ, ತಮಿಳುನಾಡು ರಾಜ್ಯಗಳ ಒಟ್ಟು 12 ತಂಡಗಳು ಪಂದ್ಯದಲ್ಲಿ ಭಾಗವಹಿಸಲಿವೆ. ವಿಜೇತರಿಗೆ ಪ್ರಥಮ 1 ಲಕ್ಷ ರೂ., ದ್ವಿತೀಯ 75 ಸಾವಿರ ರೂ., ತೃತೀಯ 50 ಸಾವಿರ ರೂ., ಚತುರ್ಥ 25 ಸಾವಿರ ರೂ. ಬಹುಮಾನ ನೀಡಲಾಗುವುದು. 15 ಸಾವಿರ ಪ್ರೇಕ್ಷಕರಿಗೆ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯದ ಸಚಿವರಾದ ಎಸ್. ಅಂಗಾರ, ವಿ. ಸುನಿಲ್ ಕುಮಾರ್, ಕೋಟ ಶ್ರೀನಿವಾಸ್ ಪೂಜಾರಿ ಮೊದಲಾದವರು ಭಾಗವಹಿಸಲಿದ್ದಾರೆ.
ವಾಜಪೇಯಿ ಅವರ 98ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರಾದ್ಯಂತ ಸುಶಾಸನ ದಿವಸ್ ಆಚರಿಸಲಾಗುತ್ತಿದೆ. ಡಿ. 25ರಂದು ಸಂಜೆ 4ಕ್ಕೆ ಉಡುಪಿ ವಿಧಾನಸಭಾ ಕ್ಷೇತ್ರದ 226 ಮತಗಟ್ಟೆಗಳ ಅಧ್ಯಕ್ಷರ ಸಮಾವೇಶ “ಬೂತ್ ಸಂಗಮ’ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉಪಸ್ಥಿತಿಯಲ್ಲಿ ನಡೆಯಲಿದೆ. ಬೂತ್ ಮಟ್ಟದ ಪ್ರತಿನಿಧಿಗಳೇ ವೇದಿಕೆಯಲ್ಲಿ ಪ್ರಮುಖರಾಗಿ ಕಾಣಿಸಿಕೊಳ್ಳಲಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ದಿಕ್ಸೂಚಿ ಭಾಷಣ, ರಾಜ್ಯ ಸಂಘಟನ ಪ್ರಧಾನ ಕಾರ್ಯದರ್ಶಿ ರಾಜೇಶ್ ಸಂಘಟನಾತ್ಮಕ ಮಾರ್ಗದರ್ಶನ ಕೊಡಲಿದ್ದಾರೆ. ಕಾರ್ಯಕ್ರಮದ ಒಂದು ಭಾಗವಾಗಿ ಜ. 7 ಮತ್ತು 8ರಂದು ಯುವ ಸಂಗಮ, ಮಾತೃ ಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದರು. ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ನಾಯ್ಕ, ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ರಾಷ್ಟ್ರೀಯ ಹಿಂದುಳಿದ ವರ್ಗ ಮೋರ್ಚಾ ಪ್ರ.ಕಾರ್ಯದರ್ಶಿ ಯಶಪಾಲ್ ಸುವರ್ಣ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮನೋಹರ ಕಲ್ಮಾಡಿ, ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಸ್ಥಾಯೀ ಸಮಿತಿ ಅಧ್ಯಕ್ಷ ಬಾಲಕೃಷ್ಣ ಡಿ. ಶೆಟ್ಟಿ, ಮುಖಂಡರಾದ ದಿನಕರ ಬಾಬು, ದಿನೇಶ್ ಅಮೀನ್, ಮಂಜುನಾಥ್ ಮಣಿಪಾಲ, ಉಮೇಶ್ ನಾಯ್ಕ, ಗಿರೀಶ್ ಅಂಚನ್, ಗಣೇಶ್ ಕುಲಾಲ್, ಸಚಿನ್ ಪೂಜಾರಿ, ಜಿಲ್ಲಾ ವಕ್ತಾರ ರಾಘವೇಂದ್ರ ಕಿಣಿ ಉಪಸ್ಥಿತರಿದ್ದರು.
Related Articles
ಬೂತ್ ಸಂಗಮದಲ್ಲಿ ನಗರ ಬಿಜೆಪಿ ಪ್ರಕಟಿಸುತ್ತಿರುವ ಸಮಗ್ರ ಕೃಷಿ ಮಾಹಿತಿ, ರಾಜ್ಯ ಮತ್ತು ಕೇಂದ್ರ ಸರಕಾರಗಳ ರೈತ ಪರ ಯೋಜನೆಗಳ ಕೈಪಿಡಿ “ಅನ್ನದಾತ ಸುಖೀಭವಃ’ ವಿಶೇಷ ಸಂಚಿಕೆಯನ್ನು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಬಿಡುಗಡೆಗೊಳಿಸಲಿದ್ದಾರೆ. ಕಾರ್ಯಕ್ರಮದ ಅನಂತರ ಗಾಯಕ ವಿಜಯ ಪ್ರಕಾಶ್ ನೇತೃತ್ವದ ತಂಡದಿಂದ ಸಂಗೀತೋತ್ಸವ ಆಯೋಜಿಸಲಾಗಿದೆ. ಗಾಯಕಿಯರಾದ ಅನುರಾಧಾ, ಐಶ್ವರ್ಯಾ ಭಾಗವಹಿಸಲಿ¨ªಾರೆ.
Advertisement
ಕ್ರೀಡಾ ವಿಜ್ಞಾನ ಕೇಂದ್ರ ಉದ್ಘಾಟನೆಅಜ್ಜರಕಾಡು ಕ್ರೀಡಾಂಗಣದಲ್ಲಿ 2 ಕೋ. ರೂ. ವೆಚ್ಚದಲ್ಲಿ ರೂಪುಗೊಂಡ ಕ್ರೀಡಾ ವಿಜ್ಞಾನ ಕೇಂದ್ರದ ಉದ್ಘಾಟನೆಯನ್ನು ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಡಿ. 24ರ ಸಂಜೆ 6 ಗಂಟೆಗೆ ನೆರವೇರಿಸಲಿದ್ದಾರೆ ಎಂದು ಶಾಸಕ ಭಟ್ ಮಾಹಿತಿ ನೀಡಿದರು.