ಬೆಂಗಳೂರು: ಖಾಸಗಿ ಅನುದಾನ ರಹಿತ ಶಾಲೆಗಳ ಶಿಕ್ಷಕರು ಆರ್ಥಿಕವಾಗಿ ತೀವ್ರ ದುಃಸ್ಥಿತಿಯಲ್ಲಿದ್ದು, ಅವರ ನೆರವಿಗೆ ಸರಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ತಮ್ಮ ಒಂದು ಇಲ್ಲವೇ ಎರಡು ದಿನಗಳ ವೇತನವನ್ನು ನೀಡುವ ಮೂಲಕ ಸಾಮಾಜಿಕ ಹೊಣೆಗಾರಿಕೆ ಪ್ರದರ್ಶಿಸಬೇಕೆಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.
ಸೋಮವಾರ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಇದು ನಮ್ಮೆಲ್ಲರ ಸಾಮಾಜಿಕ ಜವಾ ಬ್ದಾರಿಯೂ ಆಗಿದೆ.
ಕೋವಿಡ್ ಪರಿಸ್ಥಿತಿಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ ಶಾಲೆಗಳ ಶಿಕ್ಷಕರಿಗೆ ಸರಕಾರ ದಿಂದ ಯಾವ ರೀತಿಯಲ್ಲಿ ನೆರವು ನೀಡಬಹುದು ಎಂಬುದರ ಬಗ್ಗೆ ಚಿಂತನೆ ನಡೆದಿದೆ ಎಂದು ಸುರೇಶ್ ಕುಮಾರ್ ಹೇಳಿದರು.
ಶಿಕ್ಷಣ ಇಲಾಖೆಯ ಲಭ್ಯ ಸಂಪನ್ಮೂಲಗಳ ಮೂಲಕವೂ ಕಷ್ಟ ದಲ್ಲಿರುವ ಶಿಕ್ಷಕರಿಗೆ ಇತಿಮಿತಿಗಳಲ್ಲಿ ಆರ್ಥಿಕ ಸಹಕಾರ ನೀಡಲು ಸರ ಕಾರವೂ ಅವಕಾಶಗಳನ್ನು ಅವ ಲೋಕಿ ಸುತ್ತಿದೆ. ಖಾಸಗಿ ಶಾಲಾ ಶಿಕ್ಷಕರು ತೀವ್ರ ಸಂಕಷ್ಟದಲ್ಲಿರುವುದನ್ನು ಇಲಾಖೆ ಗಮನಿಸಿದೆ ಎಂದರು.
ಖಾಸಗಿ ಶಾಲಾ ಶಿಕ್ಷಕರಿಗೆ ನೆರ ವಾಗಲು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ ತನ್ನ ಒಂದು ತಿಂಗಳ ವೇತನ ನೀಡಲು ಮುಂದಾಗಿದ್ದಾರೆ. ನಾನೂ ನನ್ನ ಪಾಲನ್ನು ನೀಡುವೆ. ಶಿಕ್ಷಕರು ಉದಾರತೆ ಮೆರೆಯುವ ಮೂಲಕ ಸಮಾಜಕ್ಕೆ ಸಕಾರಾತ್ಮಕ ಸಂದೇಶ ನೀಡಬೇಕು ಎಂದರು.
ಸರಕಾರ ಕಠಿನ ಪರಿಸ್ಥಿತಿ ಯಲ್ಲಿಯೂ ಸರಕಾರಿ ಶಿಕ್ಷಕರ ವೇತನ, ಭತ್ತೆಗಳನ್ನು ನೀಡಲು ವಿಳಂಬ ಮಾಡಿಲ್ಲ. ಹೀಗಾಗಿ ಶಿಕ್ಷಕರು ಮಾನವೀಯ ಗುಣ ಮೆರೆಯಬೇಕು.
–
ಎಸ್. ಸುರೇಶ್ ಕುಮಾರ್
ಶಿಕ್ಷಣ ಸಚಿವ