Advertisement

ಆಮಿಷಕ್ಕೆ ಬಲಿಯಾಗದಂತೆ ಗ್ರಾಮ ವಿದ್ಯುತ್ ಪ್ರತಿನಿಧಿಗಳಿಗೆ ಸಚಿವರ ಮನವಿ

03:37 PM Mar 22, 2022 | Team Udayavani |

ಬೆಂಗಳೂರು: ಗ್ರಾಮ ವಿದ್ಯುತ್ ಪ್ರತಿನಿಧಿಗಳ‌ ಸೇವೆಯನ್ನು ಖಾಯಂ ಮಾಡಿಸಲಾಗುವುದು ಎಂದು‌ ಕೆಲ ಬಾಹ್ಯ ಶಕ್ತಿಗಳು ಧನ ಸಂಗ್ರಹ ಮಾಡುತ್ತಿದ್ದಾರೆ ಎಂಬ ವಿಚಾರ ಇದೀಗ ಸರಕಾರದ ಗಮನಕ್ಕೆ ಬಂದಿದ್ದು, ಇಂತಹ ಆಮಿಷಗಳಿಗೆ ಯಾರೂ ಬಲಿಯಾಗಬಾರದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ಮನವಿ ಮಾಡಿದ್ದಾರೆ.

Advertisement

ರಾಜ್ಯದ ಎಲ್ಲ ವಿದ್ಯುತ್ ಸರಬರಾಜು‌ ಕಂಪನಿಗಳ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ವಿದ್ಯುತ್ ಪ್ರತಿನಿಧಿಗಳ ಗೌರವಧನ ಪರಿಷ್ಕರಣೆ ಹಾಗೂ ಸೇವೆ ಖಾಯಂಗೊಳಿಸುವ ವಿಚಾರಕ್ಕೆ ಸಂಬಂಧಪಟ್ಟಂತೆ ಇರುವ ತಾಂತ್ರಿಕ ಅಡಚಣೆಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡುವುದಕ್ಕಾಗಿ ಈಗಾಗಲೇ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ಆ ಸಮಿತಿ ಇನ್ನೂ ತನ್ನ ವರದಿಯನ್ನು ಸಲ್ಲಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:ಕಾಫಿ ಬೆಳೆಗಾರರ ನೆರವಿಗೆ ನಿಂತ ಸರ್ಕಾರ; ರೈತರಿಗೆ ಸಬ್ಸಿಡಿ ದರದಲ್ಲಿ ವಿದ್ಯುತ್ ಪೂರೈಕೆ

ಆದರೆ ಜಿಲ್ಲಾ ವ್ಯಾಪ್ತಿಗಳಲ್ಲಿ ಗ್ರಾಮ ವಿದ್ಯುತ್ ಪ್ರತಿನಿಧಿಗಳ ಸೇವೆ ಖಾಯಂಗೊಳಿಸುತ್ತೇವೆ ಎಂದು ನಂಬಿಸಿ ಕೆಲವರು ಹಣ ಸಂಗ್ರಹ‌ ಮಾಡುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಗ್ರಾಮ ವಿದ್ಯುತ್ ಪ್ರತಿನಿಧಿಗಳು ಇಂಥ ಯಾವುದೇ ಆಮಿಷಕ್ಕೆ ಬಲಿಯಾಗಬಾರದು. ಯಾರಾದರೂ ಇಂಥ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರವ ಬಗ್ಗೆ ಮಾಹಿತಿ ಲಭ್ಯವಾದರೆ ತಕ್ಷಣ ಇಲಾಖೆಯ ಗಮನಕ್ಕೆ ತರಬೇಕು. ಇಲಾಖೆ ಅಂಥವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next