Advertisement

ಏಳು ವರ್ಷದ ಬಾಲಕನಿಗೆ ಚಿತ್ರಹಿಂಸೆ: ಓರ್ವನ ಬಂಧನ: ಗೃಹ ಸಚಿವ

06:34 PM Mar 25, 2022 | Team Udayavani |

ವಿಧಾನಪರಿಷತ್ತು: ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಒಡ್ಡೋಡಗಿ ಗ್ರಾಮದಲ್ಲಿ ಏಳು ವರ್ಷದ ಬಾಲಕನನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಚಿತ್ರಹಿಂಸೆ ನೀಡಿದ ಅಮಾನುಷ ಘಟನೆಗೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

Advertisement

ಕಾಂಗ್ರೆಸ್‌ ಸದಸ್ಯ ಪ್ರಕಾಶ್‌ ಕೆ. ರಾಠೊಡ ಅವರು ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿ, ಏಳು ವರ್ಷದ ಬಾಲಕನನ್ನು ಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಆಯಿಲ್‌ ಸುರಿದು ಸುಟ್ಟಿರುವ ಅಮಾನವೀಯ ಘಟನೆ ನಡೆದಿದೆ. ಬಾಲಕ ಮುಖ ಹಾಗೂ ಮರ್ಮಾಂಗಕ್ಕೆ ಗಂಭೀರ ಗಾಯವಾಗಿದ್ದು, ಆತನನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಬಾಲಕನ್ನನ್ನು ಚಿತ್ರಹಿಂಸೆ ನೀಡಿದವರಿಗೆ ಬಂಧಿಸಬೇಕು ಹಾಗೂ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಧ್ಯಪ್ರವೇಶಿಸಿದ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌, ಘಟನೆ ನಡೆದು 2 ದಿನವಾದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಇದೊಂದು ಅಮಾನವೀಯ ಘಟನೆ. ತಕ್ಷಣ ಆರೋಪಿಗಳನ್ನು ಬಂಧಿಸಬೇಕು. ಈ ಹಿಂದೆ ಇದೇ ಬಸವನಬಾಗವೇವಾಡಿಯಲ್ಲಿ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರವೆಸಗಿ ದೆಹಗಳನ್ನು ಬಾವಿಗೆ ಎಸೆಯಲಾಗಿತ್ತು ಎಂದು ಸರ್ಕಾರದ ಗಮನ ಸೆಳೆದರು. ಸಭಾಪತಿ ಪೀಠದಲ್ಲಿದ್ದ ತೇಜಸ್ವಿನಿಗೌಡ ಧ್ವನಿಗೂಡಿಸಿ ಇಂತಹ ಅಮಾನವೀಯ ಪ್ರಕರಣಗಳು ನಡೆಯಬಾರದು. ಸರ್ಕಾರ ಗಂಭೀರವಾಗಿ ಪರಿಗಣಿಸಿ ಕಾರ್ಯಪ್ರವೃತ್ತವಾಗಬೇಕು ಎಂದು ಹೇಳಿದರು.

ಇದಕ್ಕೆ ಉತ್ತರಿಸಿದ ಗೃಹ ಸಚಿವರು, ಘಟನೆಯ ವಿಡಿಯೋ ನೋಡಿ ಮನಸ್ಸಿಗೆ ಬಹಳ ನೋವಾಯಿತು. ಪ್ರಕರಣದ ದಾಖಲಾಗಿದೆ. ಈಗಾಗಲೇ ಒಬ್ಬನನ್ನು ಬಂಧಿಸಲಾಗಿದೆ. ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪ್ರಕರಣದ ಸಮಗ್ರ ವರದಿ ನೀಡಲು ಹಿರಿಯ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next