Advertisement
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಐಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉಮೇಶ್ ಅವರನ್ನು ಇದಕ್ಕಾಗಿ ರಾಜ್ಯದಿಂದ ನೋಡಲ್ ಆಫೀಸರ್ ಆಗಿ ನೇಮಕ ಮಾಡಿದ್ದೇವೆ. ಅವರು ಈ ಹಿಂದೆ ವಿದೇಶದಲ್ಲಿ ಅತಂತ್ರರಾಗಿದ್ದ ಕನ್ನಡಿಗರನ್ನು ಕರೆ ತಂದಿದ್ದಾರೆ. ಸಂಕಷ್ಟದಲ್ಲಿರುವವರು ಅವರನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ ಎಂದರು.
ಕೇಂದ್ರ ಸಚಿವ ಭಗವಂತ ಖೂಬಾ ಅವರ ಜನಾಶೀರ್ವಾದ ಯಾತ್ರೆಯನ್ನು ಗಾಳಿಯಲ್ಲಿ ಗುಂಡು ಹಾರಿಸಿ ಸ್ವಾಗತಿಸಿದ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಈಗಾಗಲೇ ಎಫ್‌ಐಆರ್ ದಾಖಲಾಗಿದೆ. ಅನೇಕ ಕಡೆಗಳಲ್ಲಿ ಈ ರೀತಿ ಆಗುತ್ತದೆ. ಇದು ಸರಿಯಾ ಎಂದರೆ, ಖಂಡಿತ ತಪ್ಪು. ಮಲೆನಾಡು ಮತ್ತು ಕೊಡಗಿನಲ್ಲಿ ಗಾಳಿಯಲ್ಲಿ ಗುಂಡು ಹಾರಿಸುವ ಸಂಸ್ಕೃತಿ ಇದೆ. ಖುಷಿ ಹಾಗೂ ದುಃಖದ ಸಂದರ್ಭದಲ್ಲಿ ಹೀಗೆ ಮಾಡುತ್ತಾರೆ. ಸಾರ್ವಜನಿಕವಾಗಿ ಈ ರೀತಿ ಮಾಡಿರುವುದು ತಪ್ಪು ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇದನ್ನೂ ಓದಿ :12ನೇ ವಯಸ್ಸಿಗೇ ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆ
Related Articles
ಕರಾವಳಿಯಲ್ಲಿ ಕೆಲವು ವರ್ಷಗಳಿಂದ ಭಯೋತ್ಪಾದಕ ಚಟುವಟಿಕೆ ನಡೆಯುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಚಟುವಟಿಕೆಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಮಂಗಳೂರಿನಲ್ಲಿ ಕೇಂದ್ರ ತನಿಖಾ ಸಂಸ್ಥೆ(ಎನ್‌ಐಎ) ಕಚೇರಿ ಸ್ಥಾಪಿಸುವ ಬಗ್ಗೆ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಯುತ್ತಿದೆ ಎಂದರು.
Advertisement