Advertisement

ಸರ್ಕಾರ ರಚನೆಗೆ ಸಹಕಾರ ನೀಡಿದವರಿಗೆ, ಹಿರಿಯರಿಗೆ ಸಂಪುಟದಲ್ಲಿ ಆದ್ಯತೆ: ಆರ್. ಅಶೋಕ್

04:22 PM Jan 11, 2021 | Team Udayavani |

ಚಿತ್ರದುರ್ಗ: ಸಂಪುಟ ವಿಸ್ತರಣೆ ವೇಳೆ ಸರ್ಕಾರ ರಚನೆಗೆ ಸಹಕಾರ ನೀಡಿದವರಿಗೆ ಆದ್ಯತೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.‌ಅಶೋಕ ಹೇಳಿದರು.

Advertisement

ಅಕಾಲಿಕ ಮಳೆಯಿಂದ ಉಂಟಾಗಿರುವ ಬೆಳೆ ಹಾನಿ ವೀಕ್ಷಣೆಗೆ ಸೋಮವಾರ ಚಿತ್ರದುರ್ಗ ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರ ಜತೆ ಮಾತನಾಡಿದರು.

ಸಂಪುಟಕ್ಕೆ ಸೇರುವವರ ಹೆಸರುಗಳು ಸದ್ಯದಲ್ಲೇ ಹೊರಬೀಳಲಿದ್ದು, ಸಂಪುಟ ವಿಸ್ತರಣೆಗೆ ಸಿದ್ಧತೆಗಳು ನಡೆಯುತ್ತಿವೆ. ಪಕ್ಷದ ಹಿರಿಯ ಶಾಸಕರಿಗೂ ಆದ್ಯತೆ ನೀಡಲಾಗುತ್ತದೆ ಎಂದರು.

ಬಿ.ಎಸ್‌.ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಸಿಎಂ ಹುದ್ದೆಯಲ್ಲಿ ಅವರೇ ಮುಂದುವರಿಯುವಂತೆ ಶಾಸಕರ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್‌ ಪ್ರಸ್ತಾಪ ಮಾಡಿಲ್ಲ ಎಂದು ಹೇಳಿದರು.

ಇದನ್ನೂ ಓದಿ:ಮತ್ತೆ ಮುಖ್ಯಮಂತ್ರಿ ಆಗುವುದು ಸಿದ್ದರಾಮಯ್ಯ, ಕುಮಾರಸ್ವಾಮಿಯ ಹಗಲು ಕನಸು: ಈಶ್ವರಪ್ಪ

Advertisement

ಕಾಂಗ್ರೆಸ್ ನಾಯಕರು ಹೊಟ್ಟೆಕಿಚ್ಚಿನಿಂದ ಸರ್ಕಾರದ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಹಣಕಾಸಿನ ಸಮಸ್ಯೆಯ ನಡುವೆಯೂ ಕೋವಿಡ್‌ ಪಿಡುಗನ್ನು ಸಮರ್ಥವಾಗಿ ನಿರ್ವಹಿಸಿದ್ದೇವೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸುಖದಲ್ಲೇ ಕಾಲ ಕಳೆದಿದ್ದಾರೆ ಎಂದು ತಿರುಗೇಟು ನೀಡಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಭವಿಷ್ಯ ನುಡಿಯಲು ಆರಂಭಿಸಿದ್ದಾರೆ. ಆರ್‌ಎಸ್‌ಎಸ್ ಬಗ್ಗೆ ಅವರು ಆಡಿದ ಮಾತುಗಳನ್ನು ಖಂಡಿಸುತ್ತೇವೆ. ಆರ್‌ಎಸ್‌ಎಸ್‌ನವರು ಸಗಣಿ, ಗಂಜಲ ಎತ್ತಿಲ್ಲ ಎಂಬುದನ್ನು ಇವರು ಯಾವಾಗ ನೋಡಿದ್ದರು ಎಂದು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next