ಕೊಪ್ಪಳ: ತಾಲೂಕಿನ ಕೋಳೂರು ಗ್ರಾಮದ ರೈತ ಸಿದ್ದಪ್ಪ ಅವರ ಜಮೀನಿನಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಬಿ ಸಿ ಪಾಟೀಲ್ ಅವರು ಕೃಷಿ ಇಲಾಖೆಯಿಂದ ಆರಂಭವಾದ ಬೆಳೆ ಸಮೀಕ್ಷೆಗೆ ಪ್ರಯೋಗಿಕವಾಗಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ರೈತರು ತಮ್ಮ ಜಮೀನಿನಲ್ಲಿ ತಾವೇ ಬೆಳೆ ದೃಢೀಕರಿಸಬೇಕು. ತಾವೇ ಬೆಳೆಯ ಸಮೀಕ್ಷೆ ಕೈಗೊಳ್ಳಬೇಕೆಂದು ರೈತರಿಗೆ ಮಾಹಿತಿ ನೀಡಿದರು.
ಕೃಷಿ ಇಲಾಖೆ ಅಧಿಕಾರಿಗಳು ರೈತರಿಗೆ ಸರಿಯಾದ ತಿಳುವಳಿಕೆ ನೀಡಿ ಕೈಗೊಳ್ಳಬೇಕೆಂದು ಸೂಚನೆ ನೀಡಿದರು. ರೈತರು ತಮ್ಮ ಬಳಿ ಸ್ಮಾರ್ಟ್ ಫೋನ್ ಇಲ್ಲದೇ ಇದ್ದಲ್ಲಿ ತಮ್ಮ ಸ್ನೇಹಿತರ ಅಥವಾ ಪರಿಚಯಸ್ಥರ ಸ್ಮಾರ್ಟ್ ಪೋನ್ ಮೂಲಕ ಬೆಳೆ ಸಮೀಕ್ಷೆ ಕೈಗೊಳ್ಳಬೇಕು. ಒಂದು ವೇಳೆ ಅಪರಿಚಿತರಿಂದ ಬೆಳೆಸಲು ಕೈಗೊಳ್ಳದಿದ್ದಲ್ಲಿ ಸರ್ಕಾರದಿಂದ ನಿಯೋಜಿಸಲ್ಪಟ್ಟ ಪಿಆರ್ ಗಳಿಂದ ಬೆಳೆ ಸಮೀಕ್ಷೆ ನಡೆಸಬೇಕು. ಈಗಾಗಲೇ ನಾವು ಅವರಿಗೆ ಅಗತ್ಯ ತರಬೇತಿಯನ್ನು ನೀಡಿದ್ದೇವೆ. ಪಿಆರ್ ಗಳು ರೈತರಿಗೆ ಸಹಕರಿಸಬೇಕು ಎಂದರು.
ಇದೇ ಆಗಸ್ಟ್ 24 ರೊಳಗೆ ರೈತರು ತಮ್ಮ ಬೆಳೆಯ ಸಮೀಕ್ಷೆಯನ್ನು ಆ್ಯಪ್ ನಲ್ಲಿ ಅಪ್ಲೋಡ್ ಮಾಡಬೇಕು. ಬೆಳೆ ಸಮೀಕ್ಷೆಯು ಮುಂದಿನ ದಿನಗಳಲ್ಲಿ ನಮಗೆ ತುಂಬ ನೆರವಾಗಲಿದೆ ಎಂದು ಅವರು ಹೇಳಿದರು.
ಈ ಕಾರ್ಯಕ್ರಮದಲ್ಲಿ ಸಂಸದ ಸಂಗಣ್ಣ ಕರಡಿ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಕುಮಾರ್ ಸೇರಿದಂತೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ್ ತಾಲೂಕು ಪಂಚಾಯತ್ ಅಧ್ಯಕ್ಷ ಬಾಲಚಂದ್ರನ್ ಸೇರಿ ಇತರರು ಪಾಲ್ಗೊಂಡಿದ್ದರು.