ಬೆಳಗಾವಿ: ನಗರಕ್ಕೆ ಸೋಮವಾರ ಆಗಮಿಸಿದ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರನ್ನು ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಪಕ್ಷದ ಕಾರ್ಯಾಲಯದಲ್ಲಿ ಪಕ್ಷದ ಪರವಾಗಿ ಸತ್ಕರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕಾರ್ಯಕರ್ತರು ಪಕ್ಷದ ಆಸ್ತಿ ಹಾಗೂ ರೈತರು ದೇಶದ ಬೆನ್ನೆಲುಬು ನಿಮ್ಮೆಲ್ಲರ ಸಮಸ್ಯೆಗಳಿಗೆ ಸದಾ ಸ್ಪಂದಿಸುವೆ ಎಂದು ಹೇಳಿದರು.
ರೈತರ ಬಗ್ಗೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಏನಾದರೂ ತೊಂದರೆ ಇದ್ದರೆ ನಮಗೆ ತಿಳಿಸಿದರೆ ಅದಕ್ಕೆ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದರು.
ಇದನ್ನೂ ಓದಿ: ಶುಂಠಿ ಬೆಳೆಯಿಂದ ಬದುಕು ಕಟ್ಟಿಕೊಳ್ಳುತ್ತಿರುವ ರೈತರು
ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಸಂಜಯ ಪಾಟೀಲ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ, ಸುಭಾಷ್ ಪಾಟೀಲ ಮಹೇಶ್ ಮೋಹಿತೆ. ರೈತ ಮೋರ್ಚಾದ ಪ್ರದೀಪ್ ಸಾಣಿಕೊಪ್ಪ, ವೀರಭದ್ರ ನೀತಿನ್ ಪಾಲ್ಗೊಂಡಿದ್ದರು.