ಬೆಂಗಳೂರು: ಸದನ ಸಲಹಾ ಸಮಿತಿಯನ್ನೇ ಬಹಿಷ್ಕಾರ ಮಾಡಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವಿಧಾನಸಭಾ ಸ್ಪೀಕರ್ ಗೆ ಪತ್ರ ಬರೆದಿದ್ದು, ಈ ಬಗ್ಗೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸುವ ಎಂದು ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುವಾರ ಪತ್ರ ಬರೆದ ತಕ್ಷಣ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ಆರ್.ವಿ ದೇಶಪಾಂಡೆ ಜತೆ ಚರ್ಚೆ ಮಾಡಿದ್ದೇನೆ. ಸಭೆಗೆ ಬರುವಂತೆ ಮನವಿ ಮಾಡಿದ್ದೇನೆ ಎಂದರು.
ಇದನ್ನೂ ಓದಿ:ಮುಂದುವರಿದ ಜಿದ್ದಾಜಿದ್ದಿ: ಪಂಜಾಬ್ ನ 40 ಉಗ್ರಾಣಗಳ ಮೇಲೆ ಸಿಬಿಐ ದಾಳಿ; ಅಕ್ಕಿ, ಗೋಧಿ ವಶ
ಹಿಂದಿನ ಸಲಹಾ ಸಮಿತಿಯ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾವುದೇ ಗೊಂದಲ ಇದ್ದರೂ ಚರ್ಚೆ ಮೂಲಕ ಬಗೆಹರಿಸಿಕೊಳ್ಳಬಹುದು. ಕೂತು ಚರ್ಚೆ ಮಾಡಿದರೆ ಎಲ್ಲವೂ ಬಗೆಹರಿಯುತ್ತದೆ ಎಂದು ಹೇಳಿದರು.
ನಾವು ಹಿರಿಯರ ಸೇರಿ ಚರ್ಚೆ ಮುಂದಿನ ನಿರ್ಧಾರ ತಿಳಿಸುತ್ತೇವೆ ಎಂದು ಹೇಳಿದ್ದಾರೆ. ಅವರ ಬೇಡಿಕೆ ಏನೆಂದು ಗೊತ್ತಿಲ್ಲ. ಅವರು ಸಭೆಗೆ ಬಂದರೆ ಚರ್ಚೆ ಮಾಡಬಹುದು. ಜನರ ಅಗತ್ಯ ವಿಚಾರಗಳ ಬಗ್ಗೆ ಚರ್ಚೆ ಮಾಡಬಹುದೆಂದು ಮನವಿ ಮಾಡಿದ್ದೇನೆ. ಮುಕ್ತ ಮನಸಿನಿಂದ ಕೂತು ಚರ್ಚೆ ಮಾಡಿ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡೋಣ. ನಾವೂ ಮುಕ್ತ ಮನಸ್ಸಿನಿಂದ ಸಿದ್ದರಿದ್ದೇವೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದರು.
ಇದನ್ನೂ ಓದಿ: ಕಲಾಪ ಸಲಹಾ ಸಮಿತಿ ಸಭೆಯನ್ನು ಬಹಿಷ್ಕರಿಸಲು ಕಾಂಗ್ರೇಸ್ ನಿರ್ಧಾರ : ಸಿದ್ದರಾಮಯ್ಯ
ಕಳೆದ ಅಧಿವೇಶನ ಸಂದರ್ಭದಲ್ಲಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನವಾದಂತೆ ಸದನ ನಡೆಯಲಿಲ್ಲ. ಹೀಗಾಗಿ ಈ ಬಾರಿ ಸಭೆಗೆ ಹೋಗುವುದು ಬೇಡ ಎಂಬ ನಿರ್ಧಾರವನ್ನು ಕಾಂಗ್ರೆಸ್ ಕೈಗೊಂಡಿದೆ. ಗುರುವಾರ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಈ ಬಗ್ಗೆ ಸ್ಪೀಕರ್ ಅವರಿಗೂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.