Advertisement

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ: ಪರಿಶೀಲನೆಗೆ ತಜ್ಞರ ಸಮಿತಿ: ಬಿ.ಸಿ. ನಾಗೇಶ್‌

08:33 PM Mar 21, 2022 | Team Udayavani |

ವಿಧಾನಪರಿಷತ್ತು: ಶಾಲಾ ಪಠ್ಯದಲ್ಲಿ ಭಗವದ್ಗೀತೆಯನ್ನು ಪರಿಚಯಿಸುವ ಬಗ್ಗೆ ಸಮಿತಿ ರಚಿಸಿ, ಶಿಕ್ಷಣ ತಜ್ಞರು, ಹಿರಿಯರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಈ ವಿಚಾರದ ಬಗ್ಗೆ ಮುಖ್ಯಮಂತ್ರಿಯವರ ಜೊತೆಯಲ್ಲೂ ಚರ್ಚಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ.

Advertisement

ಬಿಜೆಪಿ ಸದಸ್ಯ ಎಂ.ಕೆ. ಪ್ರಾಣೇಶ್‌ ಅವರು ಸೋಮವಾರ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಸಚಿವರು, ಶಾಲೆಗಳಲ್ಲಿ ನೈತಿಕ ಶಿಕ್ಷಣದ ಬಗ್ಗೆ ಸದನದಲ್ಲಿಯೂ ಚರ್ಚೆ ಆಗಿದೆ. ಮಕ್ಕಳಿಗೆ ನೈತಿಕ ಶಿಕ್ಷಣ ಕೊಡುತ್ತಿಲ್ಲ. ಪಠ್ಯಕ್ರಮದಿಂದಲೂ ನೈತಿಕ ಶಿಕ್ಷಣ ತೆಗೆದುಹಾಕಲಾಗಿದೆ. ಹೀಗಾಹಿ ಮಕ್ಕಳಲ್ಲಿ ನೈತಿಕ ಮೌಲ್ಯಗಳು ಬೆಳೆಯುತ್ತಿಲ್ಲ ಎಂಬ ಭಾವನೆಯೂ ಪೋಷಕರಲ್ಲಿದೆ. ಭಗವದ್ಗೀತೆ ಎಂದರೆ ಮಹಾಭಾರತದಲ್ಲಿ ಅರ್ಜುನ ದ್ವಂದ್ವದಲ್ಲಿದ್ದಾಗ ಜೀವನ ಏನು ಎಂಬುದು ಕೃಷ್ಣ ಹೇಳಿಕೊಟ್ಟಿದ್ದು. ಈ ತರಹದ ಶಿಕ್ಷಣದ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಸಮಿತಿ ರಚಿಸಿ, ಶಿಕ್ಷಣ ತಜ್ಞರು ಹಾಗೂ ಹಿರಿಯರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು.

ಈ ವಿಚಾರವಾಗಿ ಮುಖ್ಯಮಂತ್ರಿಯವರ ಜೊತೆಯಲ್ಲೂ ಮಾತುಕತೆ ನಡೆಸಲಾಗುವುದು ಎಂದರು.

ಇದಕ್ಕೂ ಮೊದಲು ವಿಷಯ ಪ್ರಸ್ತಾಪಿಸಿದ ಎಂ.ಕೆ. ಪ್ರಾಣೇಶ್‌, 2022-23ನೇ ಶೈಕ್ಷಣಿಕ ವರ್ಷದಿಂದ ಗುಜರಾತಿನ 6ರಿಂದ 12ನೇ ತರಗತಿ ವಿದ್ಯಾರ್ಥಿಗಳುಎ ಭಗವದ್ಗೀತೆ ಶಾಲಾ ಪಠ್ಯದ ಭಾಗವಾಗಲಿದೆ ಎಂದು ಅಲ್ಲಿನ ಶಿಕ್ಷಣ ಸಚಿವರು ಘೋಷಿಸಿದ್ದಾರೆ.

ಭಗವದ್ಗೀತೆಯಲ್ಲಿರುವ ಮೌಲ್ಯಗಳು ಮತ್ತು ತತ್ವಗಳು ಶಾಲಾ ಪಠ್ಯಕ್ರಮದಲ್ಲಿ ಪರಿಚಯಿಸುವ ಉದ್ದೇಶದಿಂದ ನಿರ್ಣಯ ಕೈಗೊಳ್ಳಲಾಗಿದ್ದು, ಇದು ಆಧುನಿಕ ಮತ್ತು ಪ್ರಾಚೀನ ಸಂಸ್ಕೃತಿ, ಸಂಪ್ರದಾಯಗಳನ್ನು ಜ್ಞಾನ ವ್ಯವಸ್ಥೆಗಳ ಪರಿಚಯವನ್ನು ಶಿಫಾರಸು ಮಾಡುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿದೆ. ಆದ್ದರಿಂದ ರಾಜ್ಯದಲ್ಲೂ 2022-23ನೇ ಶೈಕ್ಷಣಿಕ ವರ್ಷದಿಂದ ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆಯನ್ನು ಪರಿಚಯಿಸಬೇಕು ಎಂದು ಒತ್ತಾಯಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next