Advertisement

ಶಾಲಾ ಕಾಲೇಜಿನಲ್ಲಿ ಧ್ಯಾನ ಮಾಡಿಸುವಂತೆ ಸಚಿವ ಬಿ.ಸಿ.ನಾಗೇಶ್ ಸೂಚನೆ

10:22 PM Nov 02, 2022 | Team Udayavani |

ಬೆಂಗಳೂರು: ರಾಜ್ಯದ ಎಲ್ಲ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿದಿನ 10 ನಿಮಿಷ ಕಾಲ ಧ್ಯಾನ ಮಾಡಿಸಲು ಅಗತ್ಯ ಕ್ರಮ ವಹಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ತಮ್ಮ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Advertisement

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಸಚಿವರಿಗೆ ಪತ್ರ ಬರೆದು ಶಾಲೆಗಳಲ್ಲಿ ಮಕ್ಕಳಿಗೆ ಧ್ಯಾನ ಮಾಡಿಸಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

ಈ ಪತ್ರವನ್ನು ಉಲ್ಲೇಖಿಸಿ ತಮ್ಮ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಟಿಪ್ಪಣಿ ನೀಡಿರುವ ಸಚಿವರು ರಾಜ್ಯ ಎಲ್ಲ ಶಾಲೆ, ಪಿಯು ಕಾಲೇಜುಗಳಲ್ಲಿ ನಿತ್ಯ 10 ನಿಮಿಷ ಮಕ್ಕಳು ಧ್ಯಾನದಲ್ಲಿ ತೊಡಗಲು ಸಮಯ ನಿಗದಿಪಡಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next