Advertisement
ಮಂಗಳವಾರ ನಗರದ ಐತಿಹಾಸಿಕ ಗೋಲಗುಂಬಜ ಆವರಣದಲ್ಲಿ ನವದೆಹಲಿಯ ಆಯುಷ್ ಮಂತ್ರಾಲಯ, ಬೆಂಗಳೂರಿನ ಆಯುಷ್ ಇಲಾಖೆ, ಜಿಲ್ಲಾಡಳಿತ ಮತ್ತು ಜಿ.ಪಂ. ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟಿಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಡೀ ವಿಶ್ವಕ್ಕೆ ಮನವರಿಕೆ ಮಾಡಿಕೊಟ್ಟಿದ್ದರಿಂದ ಜೂನ್ 21ರಂದು ವಿಶ್ವದ 190 ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಯೋಗ ದಿನ ಆಚರಿಸಲಾಗುತ್ತಿದೆ. ಇದು ಭಾರತಿಯರಿಗೆ ಹೆಮ್ಮೆಯ ಸಂಗತಿ ಎಂದರು.
Related Articles
Advertisement
ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ದೇವಾನಂದ ಚವ್ಹಾಣ ಮಾತನಾಡಿದರು. ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಪಾಟೀಲ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಶೋಕ ಅಲ್ಲಾಪೂರ, ವೂಡಾ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಜಿ.ಪಂ. ಸಿಇಒ ರಾಹುಲ ಶಿಂಧೆ, ಎಸ್ಪಿ ಆನಂದಕುಮಾರ, ಎಡಿಸಿ ರಮೇಶ ಕಳಸದ, ಎಎಸ್ಪಿ, ರಾಮ ಅರಸಿದ್ದಿ, ಡಿಎಸ್ಪಿ ಲಕ್ಷ್ಮಿನಾರಾಯಣ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕೆ, ಜಿಲ್ಲಾ ಆಯುಷ್ ಅಧಿಕಾರಿ ಅನುರಾಧಾ ಚಂಚಲಕರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ. ನಾಗರಾಜ, ಪತಂಜಲಿಯ ಯೋಗಪಟು ಡಾ.ಬಾಬು ನಾಗೂರು ಇತರರು ಇದ್ದರು. ವೀರೇಶ ವಾಲಿ ಮತ್ತು ತಂಡದವರು ನಾಡಗೀತೆ ಹಾಡಿದರು. ಸಂಗೀತಾ ಮಠಪತಿ ನಿರೂಪಿಸಿದರು.