Advertisement

ಯೋಗ ಎಲ್ಲರನ್ನೂ ಒಗ್ಗೂಡಿಸುವ ಶಕ್ತಿ ಹೊಂದಿದೆ: ಕೇಂದ್ರ ಸಚಿವ ಖೂಬಾ

10:17 AM Jun 21, 2022 | keerthan |

ವಿಜಯಪುರ: ನಾನಾ ಜಾತಿ, ಧರ್ಮ, ಭಾಷೆ ಮೀರಿ ಎಲ್ಲರನ್ನೂ ಒಗ್ಗೂಡಿಸುವ ಶಕ್ತಿ ಯೋಗಕ್ಕಿದೆ ಎಂದು  ಕೇಂದ್ರ ನವೀಕರಿಣ ಇಂಧನ ರಸಾಯನಿಕ-ರಸಗೊಬ್ಬರ ಖಾತೆ ಸಚಿವರಾದ ಭಗವಂತ ಖೂಬಾ  ಹೇಳಿದರು.

Advertisement

ಮಂಗಳವಾರ ನಗರದ ಐತಿಹಾಸಿಕ ಗೋಲಗುಂಬಜ ಆವರಣದಲ್ಲಿ ನವದೆಹಲಿಯ ಆಯುಷ್ ಮಂತ್ರಾಲಯ, ಬೆಂಗಳೂರಿನ ಆಯುಷ್ ಇಲಾಖೆ, ಜಿಲ್ಲಾಡಳಿತ ಮತ್ತು ಜಿ.ಪಂ. ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟಿಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಡೀ ವಿಶ್ವಕ್ಕೆ ಮನವರಿಕೆ ಮಾಡಿಕೊಟ್ಟಿದ್ದರಿಂದ ಜೂನ್ 21ರಂದು ವಿಶ್ವದ‌ 190 ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಯೋಗ ದಿನ ಆಚರಿಸಲಾಗುತ್ತಿದೆ.‌ ಇದು ಭಾರತಿಯರಿಗೆ ಹೆಮ್ಮೆಯ ಸಂಗತಿ ಎಂದರು.

ನಾವೆಲ್ಲರೂ ಯೋಗ ಮಾಡುವ ಸಂಕಲ್ಪ ಹೊಂದೋಣ. ಯೋಗ ಮಾಡಲು ಇತರರಿಗೆ ಪ್ರೇರೇಪಿಸುವ, ಇಡೀ ಸಮಾಜವನ್ನು ಒಂದೇ ಸೂತ್ರದಡಿ ತರುವ ಪ್ರಯತ್ನದಡಿ ಯೋಗ ದಿನಾಚರಣೆಗೆ ವಿಶೇಷ ಆದ್ಯತೆ ನೀಡಿದ್ದು, ಹಲವು ಧರ್ಮಿಯರು ಹಲವು ಭಾಷಿಕರನ್ನು ಒಳಗೊಂಡ ಭಾರತ ದೇಶದಲ್ಲಿ ಎಲ್ಲರನ್ನು ಒಗ್ಗೂಡಿಸಲು ಯೋಗದಲ್ಲಿ ಮಾತ್ರ ಅಂತ ಶಕ್ತಿ ಇದೆ ಎಂದರು.

ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಮಾತನಾಡಿ, ಪ್ರಧಾನಮಂತ್ರಿಗಳು ಯೋಗವನ್ನು ಇಡೀ ವಿಶ್ವಕ್ಕೆ ಪರಿಚಯಿಸುವ ಕಾರ್ಯಕ್ರಮ ಮಾಡಿದ್ದಾರೆ. ವಿಶ್ವಕ್ಕೆ ಯೋಗ ಭಾರತ ನೀಡಿದ ಬಹುದೊಡ್ಡ ಕೊಡುಗೆ. ವರ್ಷವಿಡೀ ಯೊಗ ಮಾಡಿದರೆ ಆರೋಗ್ಯಕ್ಕೆ ಸಹಕಾರಿ ಎಂಬುದನ್ಮು ಸಮರ್ಥವಾಗಿ ಮನವರಿಕೆ ಮಾಡಿ ಕೊಟ್ಟ ದೇಶ ಭಾರತ. ಇಡೀ ವಿಶ್ವದ ಗಮನ ಈ ದಿನ ಮೈಸೂರಿನತ್ತ ಇದೆ.‌ ವಿಜಯಪುರದ ಕೀರ್ತಿಯನ್ನು ಇಡೀ ವಿಶ್ವಕ್ಕೆ ಸಾರಿದ ಗೋಲಗುಂಬಜ ಆವರಣದಲ್ಲಿ ಯೋಗ ದಿನ ಸಂಘಟಿಸಿ ಜಿಲ್ಲೆಯ ಸರ್ವ ಸಮುದಾಯದ ಜನರನ್ನು ಒಂದೆಡೆ ಸೇರಿಸಿದ ಪ್ರಯತ್ನ ಅಭಿನಂದನಾರ್ಹ ಎಂದರು.

ಜಿಲ್ಲಾಧಿಕಾರಿ ಡಾ.ವಿ.ಬಿ. ದಾನಮ್ಮನವರ ಮಾತನಾಡಿ, ದೇಶದ 75 ಐತಿಹಾಸಿಕ ತಾಣಗಳಲ್ಲಿ ವಿಜಯಪುರದ ಐತಿಹಾಸಿಕ ಗೋಲಗುಂವಜ ಐತಿಹಾಸಿಕ ತಾಣದಲ್ಲಿ ವ್ಯವಸ್ಥಿತವಾಗಿ ಯೋಗ ಕಾರ್ಯಕ್ರಮ ಸಂಘಟಿಸುವ, ಯೋಗ ಮಾಡುವ ಅವಕಾಶ ಸಿಕ್ಕಿರುವುದು ನಮ್ಮ ಸೌಭಾಗ್ಯ ಎಂದರು.

Advertisement

ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ದೇವಾನಂದ ಚವ್ಹಾಣ ಮಾತನಾಡಿದರು. ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಪಾಟೀಲ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಶೋಕ ಅಲ್ಲಾಪೂರ, ವೂಡಾ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಜಿ.ಪಂ. ಸಿಇಒ ರಾಹುಲ ಶಿಂಧೆ, ಎಸ್ಪಿ ಆನಂದಕುಮಾರ, ಎಡಿಸಿ ರಮೇಶ ಕಳಸದ, ಎಎಸ್ಪಿ, ರಾಮ ಅರಸಿದ್ದಿ, ಡಿಎಸ್ಪಿ ಲಕ್ಷ್ಮಿನಾರಾಯಣ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕೆ, ಜಿಲ್ಲಾ ಆಯುಷ್ ಅಧಿಕಾರಿ ಅನುರಾಧಾ ಚಂಚಲಕರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ. ನಾಗರಾಜ, ಪತಂಜಲಿಯ ಯೋಗಪಟು ಡಾ.ಬಾಬು ನಾಗೂರು ಇತರರು ಇದ್ದರು. ವೀರೇಶ ವಾಲಿ ಮತ್ತು ತಂಡದವರು ನಾಡಗೀತೆ ಹಾಡಿದರು. ಸಂಗೀತಾ ಮಠಪತಿ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next