Advertisement

ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ಡ್ರಗ್ ದಂಧೆಗೆ ಕಡಿವಾಣ ಹಾಕಲು ಬದ್ಧ: ಭೈರತಿ ಬಸವರಾಜ್

02:46 PM Sep 05, 2020 | keerthan |

ದಾವಣಗೆರೆ: ಡ್ರಗ್ಸ್ ವಿಚಾರವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು ಈ ದಂಧೆಗೆ ಕಡಿವಾಣ ಹಾಕಲು ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಬದ್ಧರಾಗಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದರು.

Advertisement

ದಾವಣಗೆರೆಯಲ್ಲಿ ಮಾತನಾಡಿದ ಅವರು, ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ಡ್ರಗ್ಸ್ ದಂಧೆಯಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ಮೇಲೆ ಕ್ರಮ ಆಗುತ್ತದೆ. ಡ್ರಗ್ ದಂಧೆ ನಿಯಂತ್ರಣ ವಿಚಾರವಾಗಿ ಸರ್ಕಾರ ಕೈಗೊಳ್ಳುವ ಯಾವುದೇ ತೀರ್ಮಾನಕ್ಕೂ ನಾವೆಲ್ಲ ಬದ್ಧ. ಈ ವಿಚಾರವಾಗಿ ಮುಖ್ಯಮಂತ್ರಿ ಹಾಗೂ ಗೃಹಸಚಿವರೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಾರೆ ಎಂದರು.

ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ಬಿಜೆಪಿಗೆ ಸೇರುವ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಏನೇ ಇದ್ದರೂ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

ಇದನ್ನೂ ಓದಿ: ರಾಗಿಣಿಗೆ ಡ್ರಗ್ಸ್ ಸೇವಿಸಿ ಎಂದು ಹೇಳಿರಲಿಲ್ಲ,ಬಂಧನದಿಂದ ಬಿಜೆಪಿಗೆ ಮುಜುಗರವಿಲ್ಲ: ಸೋಮಶೇಖರ್

ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಮುಖ್ಯಮಂತ್ರಿಯವರಿಗೆ ಬಿಟ್ಟ ವಿಚಾರ. ಇದರಲ್ಲಿ ಮುಖ್ಯಮಂತ್ರಿಯವರಿಗೆ ಸಂಪೂರ್ಣ ಅಧಿಕಾರ ಇದೆ. ಅವರು ಯಾವ ನಿರ್ಧಾರ ಕೈಗೊಂಡರೂ ಅದಕ್ಕೆ ನಾವು ಒಪ್ಪುತ್ತೇವೆ ಎಂದರು.

Advertisement

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ವಿಜಯೇಂದ್ರ ಸರಕಾರದ ಕೆಲಸದಲ್ಲಿ ಯಾವತ್ತೂ ಹಸ್ತಕ್ಷೇಪ ಮಾಡಿಲ್ಲ. ಸರಕಾರದ ಯಾವ ವಿಚಾರದಲ್ಲಿಯೂ ಮೂಗು ತೂರಿಸಿಲ್ಲ. ಅವರ ವಿರುದ್ಧ ಮಾಡಿರುವ ಆರೋಪಗಳೆಲ್ಲವೂ ಊಹಾಪೋಹ ಎಂದು ಸಚಿವ ಭೈರತಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next