ನವದೆಹಲಿ:ಪರಿಸರ ಹಾಗೂ ವಾಯುಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಹೆಜ್ಜೆ ಇಟ್ಟಿದೆ. ತ್ಯಾಜ್ಯ ವಸ್ತುಗಳಿಗೆ ಮೌಲ್ಯ ತಂದುಕೊಂಡುವ ಯೋಜನೆ ಸಿದ್ದಪಡಿಸುತ್ತಿದ್ದು, ವಿವಿಧ ನಗರಗಳಲ್ಲಿ ಗ್ರೀನ್ ಹೈಡ್ರೋಜನ್ ಬಳಸಿ ಬಸ್, ಕಾರು ಮತ್ತು ಲಾರಿಗಳನ್ನು ಓಡಿಸುವ ಯೋಜನೆ ಇದ್ದಿರುವುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಇದನ್ನೂ ಓದಿ:ಸಫಾರಿ ವಾಹನದ ಮೇಲೆ ದಾಳಿ ಮಾಡಿದ 13 ಅಡಿ ಎತ್ತರದ ಆನೆ: ಓಟಕ್ಕಿತ್ತ ಜನರು! ವಿಡಿಯೋ ವೈರಲ್
ಅವರು 6ನೇ ರಾಷ್ಟ್ರೀಯ ಹಣಕಾಸು ಶೃಂಗವನ್ನು ಉದ್ದೇಶಿಸಿ ಮಾತನಾಡಿದ ವೇಳೆ, ನಗರಗಳ ಕೊಳಚೆ ನೀರು ಮತ್ತು ಘನತ್ಯಾಜ್ಯದಿಂದ ಉತ್ಪಾದಿಸಬಹುದಾದ ಗ್ರೀನ್ ಹೈಡ್ರೋಜನ್ ಬಳಸಿ ಬಸ್, ಲಾರಿ ಮತ್ತು ಕಾರುಗಳನ್ನು ಓಡಿಸುವ ಯೋಜನೆ ನನ್ನದಾಗಿದೆ ಎಂದು ಹೇಳಿದರು.
ಆ ನಿಟ್ಟಿನಲ್ಲಿ ನಾನು ಘನತ್ಯಾಜ್ಯ, ಕಸಗಳಿಗೆ ಮೌಲ್ಯಗಳನ್ನು ತಂದುಕೊಡಲು ಪ್ರಯತ್ನಿಸುತ್ತಿದ್ದೇನೆ ಎಂದು ಗಡ್ಕರಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ನಾನು ಫರಿದಾಬಾದ್ ನ ತೈಲ ಸಂಶೋಧನಾ ಕೇಂದ್ರದಲ್ಲಿ ಉತ್ಪಾದಿಸುವ ಹಸಿರು ಹೈಡ್ರೋಜನ್ ನಿಂದ ಚಲಿಸುವ ಪೈಲಟ್ ಪ್ರಾಜೆಕ್ಟ್ ಕಾರನ್ನು ಖರೀದಿಸಿದ್ದೇನೆ. ಈ ಮೂಲಕ ಪೈಲಟ್ ಪ್ರಾಜೆಕ್ಟ್ ಕಾರನ್ನು ನಗರದಲ್ಲಿ ಓಡಿಸುವ ಮೂಲಕ ಜನರಲ್ಲಿ ವಿಶ್ವಾಸ ಮೂಡಿಸಲು ಪ್ರಯತ್ನಿಸುತ್ತಿರುವುದಾಗಿ ಗಡ್ಕರಿ ತಿಳಿಸಿದ್ದಾರೆ.