Advertisement
ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಅವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸದಿದ್ದರೆ ಸಂಬಂಧಪಟ್ಟ ಕಾಮಗಾರಿ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು ಹಾಗೂ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.
Related Articles
Advertisement
ಶಾಸಕ ಸಿ.ಟಿ. ರವಿ ಮಾತನಾಡಿ, ಅಮೃತ ಕುಡಿಯುವ ನೀರಿನ ಯೋಜನೆ ಮತ್ತು ಒಳಚರಂಡಿ ಕಾಮಗಾರಿ ನಿಗದಿತ ಸಮಯದಲ್ಲಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಅಮೃತ್ ಕುಡಿಯುವ ನೀರು ಯೋಜನೆ ಕೆಲವೊಂದು ಕಾಮಗಾರಿ ಮಾತ್ರ ಬಾಕಿ ಇದ್ದು, ಈ ತಿಂಗಳ ಅಂತ್ಯದಲ್ಲಿ ಪೂರ್ಣಗೊಳ್ಳಲಿದೆ ಎಂದರು.
ಒಳಚರಂಡಿ ಕಾಮಗಾರಿ ಪ್ರಾರಂಭದಲ್ಲಿ 57 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದು, ರೋಷನ್‌ಬೇಗ್ ಸಚಿವರಾಗಿದ್ದ ಅವಧಿಯಲ್ಲಿ ಕಾಮಗಾರಿ ವೆಚ್ಚವನ್ನು 87 ಕೋಟಿ ರೂಗೆ ಏರಿಕೆ ಮಾಡಲಾಗಿತ್ತು. ಮನೆ ಮನೆ ಸಂಪರ್ಕ ವ್ಯಕ್ತಿಘತವಾಗಿತ್ತು. ಈಗ ಮನೆ ಮನೆ ಸಂಪರ್ಕ ಸಂಬಂಧಪಟ್ಟ ಇಲಾಖೆಯಿಂದಲೇ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಒಳಚರಂಡಿ ಕಾಮಗಾರಿ ಗುತ್ತಿಗೆದಾರರ ನಿರ್ಲಕ್ಷ Âದಿಂದ ವಿಳಂಬವಾಗಿದ್ದು, ಈ ಹಿಂದಿನ ಗುತ್ತಿಗೆದಾರರಿಂದ ಗುತ್ತಿಗೆ ಹಿಂಪಡೆದು ಆತನಿಂದ ದಂಡ ವಸೂಲಿ ಮಾಡಲಾಗಿದೆ. ಸದ್ಯ ಕಾಮಗಾರಿಯನ್ನು ಬೇರೆ ಗುತ್ತಿಗೆದಾರನಿಗೆ ವಹಿಸಲಾಗಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಕೆ.ಎನ್. ರಮೇಶ್, ಜಿಪಂ ಸಿಇಒ ಜಿ. ಪ್ರಭು, ನಗರಸಭೆ ಅಧ್ಯಕ್ಷ ವರಸಿದ್ದಿ ವೇಣು ಗೋಪಾಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ. ಆನಂದ್, ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪ ಇದ್ದರು.