Advertisement
ವಿಶ್ವನಾಥ್ ಅವರಲ್ಲಿ ಅನಾಥ ಪ್ರಜ್ಞೆ ಕಾಡುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ತೊರೆದು ಬಂದವರೆಲ್ಲರಿಗೂ ಬಿಜೆಪಿಯಲ್ಲಿ ನ್ಯಾಯ ಸಿಕ್ಕಿದೆ ಎಂಬುದು ನನ್ನ ಅಭಿಮತ, ಮುಂಬರುವ ದಿನಗಳಲ್ಲಿ ಅವರಿಗೂ ನ್ಯಾಯ ಸಿಗುತ್ತದೆ ಮಾತ್ರವಲ್ಲದೇ ಅವರಿಗೆ ಪಕ್ಷದಲ್ಲಿ ಉನ್ನತ ಸ್ಥಾನಮಾನ ದೊರಕುವ ಭರವಸೆಯಿದೆ ಎಂದು ಸಚಿವ ಭೈರತಿ ಬಸವರಾಜ್ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಾ ತಿಳಿಸಿದರು.
Related Articles
Advertisement
ಜಿಲ್ಲೆಯ ಆರು ತಾಲೂಕಿನ ನಾಲ್ಕು ವಿಧಾನ ಸಭಾ ಕ್ಷೇತ್ರಗಳಲ್ಲಿ ಅಗತ್ಯ ಕುಡಿಯುವ ನೀರು ಮತ್ತು ಒಳ ಚರಂಡಿ ವ್ಯವಸ್ಥೆ ಕೈಗೊಂಡು ಮೂಲ ಸೌಕರ್ಯ ಒದಗಿಸಲು ಸರ್ಕಾರ ಬದ್ಧವಿದೆ. ಜಿಲ್ಲೆಯ ಅಭಿವೃದ್ಧಿಯ ಕುರಿತು ಜಿಲ್ಲಾಧಿಕಾರಿಗಳು ಗಮನಕ್ಕೆ ತಂದಿದ್ದು, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಖ್ಯಮಂತ್ರಿಗಳಿಗೆ ವರದಿ ನೀಡಲಾಗುವುದು ಎಂದು ಸಚಿವ ಭೈರತಿ ಅವರು ನುಡಿದರು.
ಸುರಪುರ ಕುಡಿಯುವ ನೀರಿನ ಸೌಕರ್ಯಕ್ಕೆ 60 ಕೋಟಿ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಯಾದಗಿರಿಯಲ್ಲಿ ಒಳಚರಂಡಿ ಕಾಮಗಾರಿ ನಿರ್ವಹಿಸಲಾಗುವುದು ಎಂದು ಸಚಿವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.
ಜಿಲ್ಲಾ ಕೇಂದ್ರ ಬೆಳವಣಿಗೆಯಾಗುತ್ತಿದ್ದು ಹೊಸ ಬಡಾವಣೆಗಳಿಗೆ ಸೂಕ್ತ ರಸ್ತೆ ಮತ್ತು ನೀರು ಸರಬರಾಜಿಗೆ ಕ್ರಮವಹಿಸಲು ಸೂಚಿಸಲಾಗುವುದು. ಖಾಸಗಿ ಲೇಔಟ್ ನಿರ್ಮಾಣಕ್ಕೆ ಕಡಿವಾಣ ಹಾಕಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಬಡವಣೆ ನಿರ್ಮಿಸಿ ಆದಾಯ ಸಂಪನ್ಮೂಲ ಕ್ರೋಢೀಕರಿಸಲು ಒತ್ತು ನೀಡಲಾಗುವುದು ಎಂದು ಸಚಿವ ಭೈರತಿ ಅವರು ಭರವಸೆ ನೀಡಿದರು.
ಶಾಸಕ ನರಸಿಂಹ ನಾಯಕ, ವೆಂಕಟರೆಡ್ಡಿ ಮುದ್ನಾಳ, ಜಿಪಂ ಸದಸ್ಯ ಮರಿಲಿಂಗಪ್ಪ ಕರ್ನಾಳ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.