ಕುಷ್ಟಗಿ: ಕಂದಾಯ ದಾಖಲೆ ಮನೆ ಬಾಗಿಲಿಗೆ ಹಾಗೂ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಬಿಜೆಪಿ ಸರ್ಕಾರದ ಕ್ರಾಂತಿಕಾರಕ ಬದಲಾವಣೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಹೇಳಿದರು.
ಶನಿವಾರ, ಕುಷ್ಟಗಿ ತಾಲೂಕಿನ ಹಿರೇಮನ್ನಾಪೂರ ಗ್ರಾಮದಲ್ಲಿ ಕಂದಾಯ ಇಲಾಖೆಯಿಂದ ಕಂದಾಯ ದಾಖಲೆಗಳು ಮನೆ ಬಾಗಿಲಿಗೆ ಕಾರ್ಯಕ್ರಮದಲ್ಲಿ ರೈತ ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸರ್ಕಾರ ರೈತರು ತಮ್ಮ ಜಮೀನು ದಾಖಲೆಗಳಿಗೆ ಕಛೇರಿ ಗೆ ಅಲೆದಾಡುವ ತೊಂದರೆ ಆಗದಂತೆ, ಮನೆ ಬಾಗಿಲಿಗೆ ದಾಖಲೆಗಳನ್ನು ತಲುಪಿಸಲಾಗುತ್ತಿದೆ. ಕಂದಾಯ ಸಚಿವ ಆರ್. ಅಶೋಕ ಪ್ರತಿ ತಿಂಗಳು ಗ್ರಾಮದಲ್ಲಿ ಗ್ರಾಮ ವಾಸ್ತವ್ಯದ ಮೂಲಕ ಸಾರ್ವಜನಿಕರಿಗೆ, ಮತದಾರರಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದು ಕೊಪ್ಪಳ ಜಿಲ್ಲೆಯ ಜನತೆಗೆ ಸಚಿವ ಆರ್.ಅಶೋಕ್ ಅವರಿಗೆ ಧನ್ಯವಾದಗಳು ಸಲ್ಲಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಿ ಆರ್ಧ ಗಂಟೆಯಲ್ಲಿ ರೈತ ಮಕ್ಕಳ ವಿಧ್ಯಾಭ್ಯಾಸಕ್ಕಾಗಿ ರೈತ ವಿದ್ಯಾಸಿರಿ ಯೋಜನೆ ಪ್ರಸ್ತಾಪಿಸಿದರು.
ಜಿಲ್ಲಾ ಉಸ್ತುವಾರಿ, ಪ್ರವಾಸೋದ್ಯಮ ಸಚಿವ ಆನಂದಸಿಂಗ್, ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ. ಗ್ರಾಮ ಪಂಚಾಯತಿ ಅಧ್ಯಕ್ಷೆ ನಿರ್ಮಾಲ ಅಳ್ಳಳ್ಳಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಕೆ.ಮಹೇಶ, ಯೋಜನಾಧಿಕಾರಿ ಎಂ.ಗಂಗಪ್ಪ, ತಹಶೀಲ್ದಾರ ಎಂ.ಸಿದ್ದೇಶ ಮತ್ತೀತರಿದ್ದರು.