ಬೆಂಗಳೂರು: ಮಠಗಳ ಅನುದಾನದಲ್ಲಿ ಕಮಿಷನ್ ಪಡೆಯುತ್ತಾರೆಂಬ ದಿಂಗಾಲೇಶ್ವರ ಶ್ರೀಗಳ ಆರೋಪ ನಿರಾಧಾರ. ಬೇರೆ ಯಾವುದೋ ಕಾರಣಕ್ಕೆ ಸಿಟ್ಟಾಗಿ ಅವರು ಈ ರೀತಿ ಹೇಳಿಕೆ ಕೊಟ್ಟಿದ್ದಾರೆ. ಶ್ರೀಗಳು ಯಾರೇ ಆಗಲಿ ಬೇಕಾಬಿಟ್ಟಿ ಮಾತನಾಡಬಾರದು ಎಂದು ಸಚಿವ ಸಿ.ಸಿ.ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ ಮಾತ್ರ ಮೀಸಲಾತಿ ಕೊಟ್ಟರೆ ಬೇರೆಯವರಿಗೂ ಅನ್ಯಾಯವಾಗಬಾರದು. ಮುಖ್ಯಮಂತ್ರಿಯವರು ಎಲ್ಲ ಸಮುದಾಯಕ್ಕೂ ನ್ಯಾಯ ಒದಗಿಸಲು ಚಿಂತನೆ ಮಾಡುತ್ತಿದ್ದಾರೆ. ಸದ್ಯದಲ್ಲೇ ಗುಡ್ ನ್ಯೂಸ್ ಸಿಗಲಿದೆ ಎಂದರು.
ಇದನ್ನೂ ಓದಿ:ಸಿದ್ದರಾಮಯ್ಯ ಪರ್ಸಂಟೇಜ್ ಪಿತಾಮಹ, ಅನೈತಿಕ ರಾಜಕಾರಣದ ಅಸಲಿ ಅಪ್ಪ: ಕುಮಾರಸ್ವಾಮಿ ಟೀಕೆ
ಲೋಕೋಪಯೋಗಿ ಇಲಾಖೆಯಲ್ಲಿ ನಾಲ್ಕು ಸಾವಿರ ಕೋಟಿ ರೂ. ಬಿಲ್ ಬಾಕಿ ಇದೆ. ಮಹದೇವಪ್ಪ ಅವರ ಕಾಲದಿಂದಲೂ ಇದೆ. ನಾನು ಇಲಾಖೆಗೆ ಬಂದ ಮೇಲೆ ಬಿಲ್ ಬಾಕಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಹುಬ್ಬಳ್ಳಿ ಘಟನೆ ಪೂರ್ವನಿಯೋಜಿತ. ಇದರ ಹಿಂದೆ ಷಡ್ಯಂತ್ರವಿದೆ ಎಂದು ಸಚಿವ ಸಿ.ಸಿ.ಪಾಟೀಲ್ ಹೇಳಿದರು.