Advertisement

ಸಚಿವ ಸಿಟಿ ರವಿಗೂ ತಾಗಿದ ಕೋವಿಡ್ ಸೋಂಕು: ಯಾವುದೇ ಸೋಂಕು ಲಕ್ಷಣಗಳಿಲ್ಲ ಎಂದ ಸಚಿವ

07:55 PM Jul 11, 2020 | keerthan |

ಚಿಕ್ಕಮಗಳೂರು: ಸಚಿವ ಸಿ.ಟಿ.ರವಿ ಅವರಿಗೆ ಕೋವಿಡ್-19 ಪಾಸಿಟಿವ್ ದೃಢವಾಗಿದೆ. ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್ ಬೆಂಗಳೂರಿನಲ್ಲಿ ಮಾದ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

Advertisement

ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿದ್ದು, ನಾಣು ಕ್ಷೇಮವಾಗಿದ್ದೇನೆ. ನನಗೆ ಕೋವಿಡ್ ಸೋಂಕಿನ ಯಾವುದೇ ಲಕ್ಷಣಗಳಿಲ್ಲ. ಚಿಕ್ಕಮಗಳೂರು ಸಮೀಪದ ರಾಮನಹಳ್ಳಿ ಯಲ್ಲಿರುವ ಫಾರಂಹೌಸ್‍ನಲ್ಲಿ ಸ್ವತಃ ಹೋಮ್ ಕ್ವಾರಂಟೈನ್ ಆಗಿರುವುದಾಗಿ ಬರೆದುಕೊಂಡಿದ್ದಾರೆ.

ಸಚಿವ ಸಿ.ಟಿ.ರವಿ ಶುಕ್ರವಾರ ತಡರಾತ್ರಿ ಚಿಕ್ಕಮಗಳೂರು ನಗರಕ್ಕೆ  ಆಗಮಿಸಿ ತಮ್ಮ ಫಾರಂಹೌಸ್‍ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶನಿವಾರ ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್ ಮಾದ್ಯಮಗಳಿಗೆ ಹೇಳಿಕೆ ನೀಡುವ ಸಂದರ್ಭದಲ್ಲಿ ಸಚಿವ ಸಿ.ಟಿ.ರವಿ ಅವರಿಗೂ ಕೋವಿಡ್ ಪಾಸಿಟಿವ್ ಬಂದಿದೆ ಎಂದು ಹೇಳಿದ್ದರು.

ವೈದ್ಯಕೀಯ ಶಿಕ್ಷಣ ಸಚಿವರ ಹೇಳಿಕೆಯಿಂದ ಗೊಂದಲಕ್ಕೆ ಒಳಗಾದ ಪಕ್ಷದ ಮುಖಂಡರು ಹಾಗೂ ಸಾರ್ವಜನಿಕರು ಸಚಿವ ಸಿ.ಟಿ.ರವಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಯತ್ನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನನಗೆ ಸೋಂಕಿನ ಲಕ್ಷಣಗಳಿಲ್ಲ. ಆದರೂ ಚಿಕ್ಕಮಗಳೂರು ಸಮೀಪದ ರಾಮನಹಳ್ಳಿಯಲ್ಲಿರುವ ಫಾರಂಹೌಸ್‍ನಲ್ಲಿ ತಾವೇ ಸ್ವತಹಃ ಹೋಮ್ ಕ್ವಾರಂಟೈನ್ ನಲ್ಲಿರುವುದಾಗಿ ಟ್ವೀಟ್ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next