Advertisement
ಸಮನ್ವಯ ಸಮಿತಿ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಿಗೆ ಸರ್ಕಾರದ ಮಾಹಿತಿ ನೀಡಲು ಎರಡೂ ಪಕ್ಷಗಳಿಂದ ತಲಾ ಒಬ್ಬರು ವಕ್ತಾರರನ್ನು ನೇಮಿಸಲಾಗುವುದು. ಹೀಗಾಗಿ ಯಾವುದೇ ಸಚಿವರು ಅನಗತ್ಯ ಹೇಳಿಕೆಗಳನ್ನು ನೀಡಬಾರದು ಎಂದು ಸೂಚಿಸಿರುವುದಾಗಿ ತಿಳಿಸಿದರು.
Related Articles
ಬೆಂಗಳೂರು: ವಿಧಾನಮಂಡಲ ಅಧಿವೇಶನಕ್ಕೆ ಮುನ್ನವೇ ಸಂಪುಟ ವಿಸ್ತರಣೆ ಮೂಲಕ ಸಮ್ಮಿಶ್ರ ಸರ್ಕಾರದಲ್ಲಿರುವ ಅಸಮಾಧಾನಕ್ಕೆ ತೆರೆ ಎಳೆಯಬೇಕು ಎಂಬ ನಿರೀಕ್ಷೆ ಹುಸಿಯಾಗಿದೆ. ಅಧಿವೇಶನ ಮುಗಿದ ಬಳಿಕವೇ ಸಂಪುಟ ವಿಸ್ತರಣೆಗೆ ಸಮನ್ವಯ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
Advertisement
ಸೋಮವಾರದಿಂದಲೇ ಅಧಿವೇಶನ ಆರಂಭವಾಗಲಿದ್ದು, ರಾಜ್ಯಪಾಲರ ಭಾಷಣ, ಬಜೆಟ್ ಮಂಡನೆ ಮುಂತಾದ ಪ್ರಕ್ರಿಯೆಗಳು ನಡೆಯಲಿರುವುದರಿಂದ ಸಂಪುಟ ವಿಸ್ತರಣೆ ಮಾಡುವುದು ಕಷ್ಟಸಾಧ್ಯ. ಹೀಗಾಗಿ ಅಧಿವೇಶನ ಮುಗಿದ ಬಳಿಕ ಈ ಕೆಲಸಕ್ಕೆ ಕೈಹಾಲು ಸಭೆ ಒಪ್ಪಿಗೆ ಸೂಚಿಸಿದೆ.
ಸಭೆಯ ಬಳಿಕ ಈ ಕುರಿತು ಮಾಹಿತಿ ನೀಡಿದ ಕೆ.ಸಿ.ವೋಣುಗೋಪಾಲ್, ಬಜೆಟ್ ಅಧಿವೇಶನ ಆರಂಭವಾಗುತ್ತಿರುವುದರಿಂದ ಅಧಿವೇಶನ ಮುಗಿದ ನಂತರವೇ ಸಂಪುಟ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ. ಖಾಲಿ ಇರುವ ಏಳು ಸ್ಥಾನಗಳನ್ನು ಅಧಿವೇಶನದ ನಂತರ ಭರ್ತಿ ಮಾಡಲಾಗುವುದು ಎಂದು ಹೇಳಿದರು.